ವಿಪಕ್ಷಗಳಿಗೆ ನ್ಯಾಯಾಲಯ ಪಾಳಮೋಕ್ಷ ಮಾಡಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

0

ವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ನೂತನಸಂಸತ್ಭವನ (New Parliament Building) ಉದ್ಘಾಟನೆ ಯಾಗುವುದನ್ನು (inauguration) ವಿರೋಧಿಸಿ ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿದ್ದ ವಿಪಕ್ಷ ನಾಯಕರಿಗೆ ಭಾರೀ ಮುಖಭಂಗವಾಗಿದೆ.

ರಾಷ್ಟ್ರಪತಿಯವರಿಂದಲೇ ಉದ್ಘಾಟನೆಯಾಗಬೇಕು ಎಂದು ಲೋಕಸಭೆ ಕಾರ್ಯಾಲಯಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಸುಪ್ರೀಂ ಕೋರ್ಟ್ ನ ಈ ನಿರ್ಧಾರ ವಿಪಕ್ಷಗಳಿಗೆ ಮಾಡಿದ ಕಪಾಳಮೋಕ್ಷದಂತಿದೆ ಎಂದಿದ್ದಾರೆ. ಸುಪ್ರೀಂ ಕೋರ್ಟ್ ನ ತೀರ್ಪಿನ ಬೆನ್ನಲ್ಲೇ ಟ್ವೀಟರ್ ಮೂಲಕ ವಿಪಕ್ಷ ನಾಯಕರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಸಂಸತ್ ಭವನದ ಉದ್ಘಾಟನೆ ವಿಚಾರದಲ್ಲಿ ರಾಜಕೀಯ ಮಾಡಿದ ವಿಪಕ್ಷಗಳಿಗೆ ನ್ಯಾಯಾಲಯ ಪಾಳಮೋಕ್ಷ ಮಾಡಿದೆ ಎಂದಿದ್ದಾರೆ.

ನೂತನ ಸಂಸತ್ ಕಟ್ಟಡ ರಾಷ್ಟ್ರಪತಿಗಳಿಂದ ಉದ್ಘಾಟಿಸುವಂತೆ ನಿರ್ದೇಶನ ಕೋರಿ ಅಡ್ವೋಕೇಟ್ ಜಯಾ ಅವರು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ಲೋಕಸಭೆ ಕಾರ್ಯಾಲಯಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆರ್ಟಿಕಲ್ 79ಕ್ಕೂ, ಪಾರ್ಲಿಮೆಂಟ್ ಮತ್ತು ರಾಷ್ಟ್ರಪತಿಗಳ ಕುರಿತು ಹೇಳಿರುವ ಅಂಶಕ್ಕೂ, ಪಾರ್ಲಿಮೆಂಟ್ ಉದ್ಘಾಟನೆಗೂ ಏನು ಸಂಬಂಧ ಅಂತಾ ಪ್ರಶ್ನಿಸಿದ ಸುಪ್ರೀಂ ಕೋರ್ಟ್, ಇದೇ ವೇಳೆ ಈ ಅರ್ಜಿ ಸಲ್ಲಿಕೆಯ ಉದ್ದೇಶ ನಮಗೆ ಅರ್ಥವಾಗುತ್ತದೆ ಎಂದು ಸೂಕ್ಷ್ಮವಾಗಿ, ತೀಕ್ಷ್ಣವಾಗಿ ಹೇಳಿದೆ.

About Author

Leave a Reply

Your email address will not be published. Required fields are marked *

You may have missed