ಡಾರ್ಲಿಂಗ್ ಕೃಷ್ಣ, ರಚಿತಾ ರಾಮ್ ನಟನೆಯ ‘ಲವ್ ಮೀ ಆರ್ ಹೇಟ್ ಮೀ’ ಚಿತ್ರೀಕರಣ ಕಂಪ್ಲೀಟ್

0

ಡಾರ್ಲಿಂಗ್ ಕೃಷ್ಣ ಹಾಗೂ ರಚಿತಾ ರಾಮ್ ನಟನೆಯ ಲವ್ ಮೀ ಆರ್ ಹೇಟ್ ಮೀ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ. ಇದೇ ಸೆಪ್ಟೆಂಬರ್ 29 ರಂದು ‘ಲವ್ ಮೀ ಆರ್ ಹೇಟ್ ಮೀ’ ಚಿತ್ರ ಬಿಡುಗಡೆಯಾಗಲಿದೆ.

‘ಲವ್ ಮೀ ಆರ್ ಹೇಟ್ ಮೀ’ ಚಿತ್ರಕ್ಕೆ ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ದೀಪಕ್ ಗಂಗಾಧರ್ ಮೂವೀಸ್ ಲಾಂಛನದಲ್ಲಿ ದೀಪಕ ಗಂಗಾಧರ್ ಅವರ ಜೊತೆಗೆ ಸುನೀಲ್ ಬಿ.ಎನ್, ಮದನ್ ಗಂಗಾಧರ್, ಚಂದನ್ ಜೆ ಹಾಗೂ ನಾಗರಾಜ್ ಗೌಡ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಲವ್ ಸ್ಟೋರಿ ಜಾನರ್ ನ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀನಿಧರ್ ಸಂಭ್ರಮ್ – ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಮುರಳಿ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಯೋಗಾನಂದ್ ಮುದ್ದಾನ್, ರಘು ನಡವಳ್ಳಿ ಹಾಗೂ ರಘು ಸಂಭಾಷಣೆ ಬರೆದಿದ್ದಾರೆ.

About Author

Leave a Reply

Your email address will not be published. Required fields are marked *

You may have missed