ಕರ್ನಾಟಕದಲ್ಲಿ ಅನ್ನಭಾಗ್ಯ ಜಾರಿಗೆ ವಿಳಂಬ

0

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರರಿಗೆ 6 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಇದರಲ್ಲಿ 5 ಕೆಜಿ ಉಚಿತ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ ನೀಡುವ ಹೆಚ್ಚುವರಿ ಅಕ್ಕಿಗೆ ಹೆಚ್ಚುವರಿ ಹೊರೆ ಬೀಳಲಿದೆ.

ಒಟ್ಟಾರೆಯಾಗಿ ಕಾಂಗ್ರೆಸ್ ಜನರಿಗೆ ಭರವಸೆ ನೀಡಿದಂತೆ, ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಗೆ ಹೆಚ್ಚುವರಿಯಾಗಿ ಇನ್ನೂ ಐದು ಕೆಜಿ ಅಕ್ಕಿ ಸೇರಿಸಬೇಕು. ಇದಕ್ಕಾಗಿ 742.86 ಕೋಟಿ ಹಣದ ಹೊರೆ ಬೀಳಲಿದೆ.

ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡಲು ಒಪ್ಪಿಗೆ ಸೂಚಿಸಿದರೂ ಕರ್ನಾಟಕದಲ್ಲಿ ಅನ್ನಭಾಗ್ಯ ಜಾರಿಗೆ ವಿಳಂಬವಾಗಲಿದೆ. ಇದಕ್ಕೆ ಸಂಬಂಧಿಸಿದ ಹಣಕಾಸು ಪ್ರಕ್ರಿಯೆ ನಡೆಯಲು ಸಂಪೂರ್ಣ ಜೂನ್ ತಿಂಗಳು ಬೇಕಾಗಬಹುದು ಎಂದು ಮೂಲಗಳು ತಿಳಿಸಿವೆ. ಹೆಚ್ಚುವರಿ 5 ಕೆಜಿ ಅಕ್ಕಿ ನೀಡಲು ಮಾಸಿಕ 742.86 ಕೋಟಿ ನೀಡಬೇಕು. ಎಲ್ಲ ಹಣಕಾಸು ಪ್ರಕ್ರಿಯೆ ಮುಗಿಸಲು 1 ತಿಂಗಳು ಸಮಯ ಬೇಕಾಗುತ್ತದೆ. ಕೇಂದ್ರ ನಿರಾಕರಿಸಿದರೆ ಟೆಂಡರ್ ಪ್ರಕ್ರಿಯೆಗೆ ಮತ್ತಷ್ಟು ಸಮಯ ಬೇಕಾಗುತ್ತದೆ. ಟೆಂಡರ್ ಮೂಲಕ ಅಕ್ಕಿ ಖರೀದಿ ಮಾಡಲು ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಹೊರೆ ಬೀಳಬಹುದು.

About Author

Leave a Reply

Your email address will not be published. Required fields are marked *

You may have missed