ವಾರಕ್ಕೊಮ್ಮೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

0

ಬೆಂಗಳೂರು ;- ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

2023-24ನೆ ಸಾಲಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಂದರಿಂದ ಎಂಟನೆ ತರಗತಿಯ ಮಕ್ಕಳಿಗೆ ರಕ್ತಹೀನತೆ ನಿವಾರಣೆಗಾಗಿ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದಲ್ಲಿ ಒಂದು ದಿನ ನೀಡುವಂತೆ ತಿಳಿಸಲಾಗಿದೆ.

ಮೊಟ್ಟೆಯೊಂದಕ್ಕೆ 6 ರೂ.ಗಳನ್ನು ನಿಗಧಿಪಡಿಸಿದೆ.

ಕಲ್ಯಾಣ ಕರ್ನಾಟಕ ವಿಭಾಗದ 8 ಜಿಲ್ಲೆಗಳಾದ ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಅನುದಾನದಲ್ಲಿ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆಯನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಟಾನ ಮಾಡುವಂತೆ ಸೂಚಿಸಲಾಗಿದೆ.

About Author

Leave a Reply

Your email address will not be published. Required fields are marked *

You may have missed