ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಸಾಧಕರ ಸೀಟ್ ನಲ್ಲಿ ಡಿಕೆಶಿ

0

ರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಲಿದ್ದಾರೆ ಎಂಬ ಸುದ್ದಿ ಸಾಕಷ್ಟು ಸಮಯದಿಂದ ಹರಿದಾಡಿತ್ತು. ಆದರೆ ಈ ಭಾರಿ ಅದು ನಿಜವಾಗಿದೆ. ಸಾಧಕರ ಸೀಟ್​ನಲ್ಲಿ ಡಿ.ಕೆ.ಶಿವಕುಮಾರ್ ಕುಳಿತಿರುವುದು ಖಚಿತವಾಗಿದ್ದು, ಸ್ಪೆಷಲ್​ ಎಪಿಸೋಡ್​ನ ಚಿತ್ರೀಕರಣ ಕೂಡ ನಡೆದಿದೆ.

 

ಭಾನುವಾರ ಅಬ್ಬಾಯಿನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಡಿಕೆಶಿ ಭಾಗಿಯಾಗಿದ್ದು, ಈ ವೇಳೆ ತಮ್ಮ ಬದುಕನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಈ ಹಿಂದೆಯೂ ಹಲವು ರಾಜಕಾರಣಿಗಳು ಆಗಮಿಸಿದ್ದರು. ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಇದೀಗ ಡಿ.ಕೆ ಶಿವಕುಮಾರ್ ಸೇರಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆ. ಶಿವಕುಮಾರ್ ಅವರ ಬಾಲ್ಯ, ಶಿಕ್ಷಣ, ರಾಜಕೀಯ ಎಂಟ್ರಿ, ಗೆಲುವು, ಜೊತೆಗೆ ಸಿಬಿಐ, ಇಡಿ, ಐಟಿ ಪ್ರಕರಣಗಳ ಬಗ್ಗೆಯೂ ಅನಾವರಣವಾಗಲಿದೆ.

ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಅನ್ನು ಪ್ರಸಾರ ಮಾಡಲಾಗುತ್ತದೆ ಎಂಬ ಮಾಹಿತಿ ಇದ್ದು, ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಡಿಕೆಶಿ ಕಂತುಗಳನ್ನು ನೋಡಬಹುದಾಗಿದೆ.

About Author

Leave a Reply

Your email address will not be published. Required fields are marked *

You may have missed