ತಮಿಳುನಾಡು ಸಿಎಂ ಸ್ಟಾಲಿನ್ ಬರಮಾಡಿಕೊಂಡ DKS

0

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಕಟ್ಟಿಹಾಕಲು ಬಿಜೆಪಿ ಶತಾಯಗತಾಯ ಅಧಿಕಾರದಿಂದ ದೂರವಿಡಲು ವಿಪಕ್ಷಗಳು ಒಂದಾಗಿವೆ. ಈ ಸಂಬಂಧ ಈಗಾಗಲೆ ಬಿಹಾರದ ಪಾಟ್ನಾದಲ್ಲಿ ಸಭೆ ನಡೆಸಿದ್ದವು. ಆದರೆ ಇಲ್ಲಿ ಒಮ್ಮತ ಮೂಡದ ಕಾರಣ ಇಂದು ಬೆಂಗಳೂರಲ್ಲಿ ಸಭೆ ನಡೆಸಲಿದ್ದು ಈ ಸಭೆಗೆ ಬೇರೆ ಬೇರೆ ರಾಜ್ಯದ ನಾಯಕರುಗಳು ಆಗಮಿಸುತ್ತಿದ್ದಾರೆ. ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ ನಡೆಯುವ ಹಿನ್ನೆಲೆ ಇಂದು ಬೆಂಗಳೂರಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಆಗಮಿಸಿದ್ದಾರೆ.ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

About Author

Leave a Reply

Your email address will not be published. Required fields are marked *

You may have missed