ಯಾರು ಕೂಡ ಗೊಂದಲ ಮೂಡಿಸುವ ಹೇಳಿಕೆ ನೀಡಬೇಡಿ: ರಣದೀಪ್ ಸಿಂಗ್ ಸುರ್ಜೇವಾಲಾ

0

ಬೆಂಗಳೂರು: ಮುಂದಿನ 5 ವರ್ಷಗಳವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಅಧಿಕಾರವನ್ನು ಮುಂದುವರಿಸಲಿದ್ದಾರೆ ಎಂಬ ಸಚಿವ ಎಂ.ಬಿ. ಪಾಟೀಲ್‌ ಹೇಳಿಕೆಗೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಯಾರೂ ಕೂಡ ಅನಗತ್ಯ ಹೇಳಿಕೆ ನೀಡಬಾರದು. ಸಿಎಂ, ಡಿಸಿಎಂ ನಡುವಿನ ಮಾತುಕತೆಗಳು ನಾಲ್ಕು ಗೋಡೆಯ ಮಧ್ಯೆ ನಡೆದಿರುವುದು. ಯಾರೂ ಕೂಡ ಗೊಂದಲ ಮೂಡಿಸುವ ಹೇಳಿಕೆ ನೀಡಬೇಡಿ.

ಎಲ್ಲವನ್ನೂ ನಾವು ನೋಡಿಕೊಳ್ಳುತ್ತೇವೆ ಎಂದು ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ. ಗೊಂದಲ ಮೂಡಿಸುವ ಹೇಳಿಕೆ ನೀಡಿದರೆ ಎಐಸಿಸಿ ಎಲ್ಲವನ್ನೂ ಗಮನಿಸುತ್ತದೆ. ಯಾವುದೇ ತೀರ್ಮಾನಗಳಿದ್ದರೂ ಎಐಸಿಸಿ ನಾಯಕರೇ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ರಣದೀಪ್‌ ಸಿಂಗ್‌ ಸುರ್ಜೆವಾಲ ಹೇಳಿಕೆ ನೀಡುವ ಮೂಲಕ ಈಗ ಹುಟ್ಟಿರುವ ಚರ್ಚೆಗೆ ತೆರೆ ಎಳೆಯಲು ಪ್ರಯತ್ನ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed