ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 143 ಕೋವಿಡ್ ಪ್ರಕರಣಗಳು ಪತ್ತೆ..!

0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 143 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 158 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 40,35,744 ಸೋಂಕಿತರು ಸೋಂಕು ಮುಕ್ತರಾಗಿದ್ದಾರೆ.

ಗುರುವಾರದಂದು 10,701 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಿದ್ದು, ಈ ಪೈಕಿ 288 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ರಾಜ್ಯದಲ್ಲಿ ಒಟ್ಟು 40,77,103 ಕೋವಿಡ್ ಪ್ರಕರಣಗಳು ಪತ್ತೆಯಾದಂತಾಗಿದೆ.

ನಿನ್ನೆ ರಾಜ್ಯದಲ್ಲಿ ಯಾವುದೇ ಸಾವು ಪ್ರಕರಣ ದಾಖಲಾಗಿಲ್ಲ, ಆದರೆ ಈವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 40,280 ಆಗಿದೆ. ರಾಜ್ಯದಲ್ಲಿ ನಿನ್ನೆ ಒಂದು ದಿನದಲ್ಲಿ ಪತ್ತೆಯಾದ ಪ್ರಕರಣಗಳ ಶೇಕಡಾವಾರು ಪ್ರಮಾಣ 2.23ರಷ್ಟಿದ್ದು, ವಾರದ ಶೇಕಡಾವಾರು ಪ್ರಮಾಣ 2.89ರಷ್ಟಿದೆ. ಸದ್ಯ ರಾಜ್ಯದಲ್ಲಿ 1037 ಸಕ್ರಿಯ ಪ್ರಕರಣಗಳು ಇದ್ದು, ಚಿಕಿತ್ಸೆ ಮುಂದುವರಿದಿದೆ. ಇನ್ನೂ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದೆ.

About Author

Leave a Reply

Your email address will not be published. Required fields are marked *

You may have missed