ಒಡಿಶಾದಲ್ಲಿ ಗೂಡ್ಸ್ ರೈಲಿಗೆ ಎಕ್ಸ ಪ್ರೆಸ್ ರೈಲು ಡಿಕ್ಕಿ: ಹಲವರು ಸಾವಿನಲ್ಲಿರುವ ಶಂಕೆ!

0

ಭುವನೇಶ್ವರ್: ಒಡಿಶಾದ (Odisha) ಬಾಲಸೋರ್ ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು (Coromandel Express Train) ಡಿಕ್ಕಿ ಹೊಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಹಲವರು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.

ಮೂಲಗಳ ಪ್ರಕಾರ ಶಾಲಿಮಾರ್ – ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬಾಲಸೋರ್ ಜಿಲ್ಲೆಯ ಬಹನಾಗಾ ರೈಲ್ವೇ ನಿಲ್ದಾಣದ ಬಳಿಕ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ರೈಲಿನ 8 ಬೋಗಿಗಳು ಹಳಿತಪ್ಪಿವೆ.

ಎಕ್ಸ್‌ಪ್ರೆಸ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದ್ದು, ಹಲವು ಸಾವಾಗಿರುವುದಾಗಿ ಶಂಕಿಸಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed