ಇಸ್ರೋ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ʼಗೆ ಹೃದಯಾಘಾತ

0

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್  ಅವರಿಗೆ ಕೊಲಂಬೊದಲ್ಲಿ ಇಂದು ಲಘು ಹೃದಯಾಘಾತ ಸಂಭವಿಸಿದೆ. ಸದ್ಯ ಕಸ್ತೂರಿ ರಂಗನ್ ಅವರನ್ನು ಏರ್​​ಲಿಫ್ಟ್ ಮೂಲಕ ಕೊಲಂಬೊದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಸಂಜೆ 5.30ಕ್ಕೆ HAL ಏರ್​ಪೋರ್ಟ್​ಗೆ ಆಗಮಿಸಲಿದ್ದು, ಝೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಆಗಮಿಸಲಿದ್ದಾರೆ. ಶ್ರೀಲಂಕಾಕ್ಕೆ ತೆರಳಿದ್ದ ಸಮಯದಲ್ಲಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗುತ್ತಿದೆ. ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಅವರು ಚಿಕಿತ್ಸೆ ನೀಡಲಿದ್ದಾರೆ. ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್​ ಖಚಿತಪಡಿಸಿದ್ದು, ಕಸ್ತೂರಿರಂಗನ್ ಅವರ ಆರೋಗ್ಯ ಮತ್ತು ಚಿಕಿತ್ಸೆಯ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೋಡಿಕೊಳ್ಳುತ್ತವೆ ಎಂದಿದ್ದಾರೆ.

ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪುರಸ್ಕಾರಗಳಾದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಕಸ್ತೂರಿ ರಂಗನ್ ಅವರು ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಎನ್‌ಐಐಟಿ ವಿಶ್ವವಿದ್ಯಾಲಯಗಳಲ್ಲಿ ಮಾಜಿ ಕುಲಪತಿಯಾಗಿದ್ದರು. ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಕುಲಪತಿಯೂ ಹೌದು. ಅವರು ಕರ್ನಾಟಕ ಜ್ಞಾನ ಆಯೋಗದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed