ರಾಜ್ಯದಲ್ಲಿ ಮತ್ತೆ ಶುರುವಾಯ್ತಾ ಕೋವಿಡ್ ಮಹಾಮಾರಿ ಆತಂಕ..!

0

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳಲ್ಲಿ ದಿನದಿಂದ ದಿನ ಏರಿಕೆ ಕಂಡುಬರುತ್ತಿದೆ. ನಿನ್ನೆ ರಾಜ್ಯದಲ್ಲಿ 95 ಹಾಗೂ ಬೆಂಗಳೂರಿನಲ್ಲಿ 79 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 100 ದಿನಗಳ ನಂತರ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊನಾರೋನಾ ಪ್ರಕರಣ ಹೆಚ್ಚಳವಾಗಿದೆ.

 

ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಒಟ್ಟು 391 ಸಕ್ರಿಯ ಪ್ರಕರಣಗಳು ಇದ್ದು, ವಾರದಲ್ಲಿ ಕೋವಿಡ್ ಖಚತ ಪ್ರಕರಣ ಶೇಕಡವಾರು ಪ್ರಮಾಣ 2.44ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚಳವಾಗುತ್ತಿದ್ದರಿಂದ ರಾಜ್ಯದಲ್ಲಿ ಮತ್ತೆ ಮಹಾಮಾರಿ ಶುರುವಾಗುತ್ತಾ ಎನ್ನುವ ಆತಂಕ ಸೃಷ್ಟಿಸಿದೆ.

About Author

Leave a Reply

Your email address will not be published. Required fields are marked *

You may have missed