ರಾಜ್ಯದಲ್ಲಿ H3N2 ಸೋಂಕಿನ ಭೀತಿ: ಸಚಿವ ಡಾ. ಸುಧಾಕರ್ ಹೇಳಿದ್ದೇನು..?

0

ಬೆಂಗಳೂರು : ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.

ಸುಧಾಕರ್, ದೇಶದಲ್ಲಿ H3N2 ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. H3N2 ಸೋಂಕಿನ ಬಗ್ಗೆ ಯಾರೂ ಗಾಬರಿಪಡಬೇಕಿಲ್ಲ. ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

ಇಂದಿನಿಂದಲೇ ಆರೋಗ್ಯ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ರಾಜ್ಯದಲ್ಲಿ H3N2 26 ಸೋಂಕು ಪತ್ತೆಯಾಗಿವೆ. ಮಕ್ಕಳು ಹಾಗೂ ಗರ್ಭಿಣಿಯರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ. ದೀರ್ಘಕಾಲದಿಂದ ಕೆಮ್ಮು ಹಾಗೂ ಜ್ವರದ ಲಕ್ಷಣ ಇದ್ದರೆ H3N2 ವೈರಸ್ ಕಾರಣವಾಗಿರಬಹುದು. ದೇಶಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ರೋಗಲಕ್ಷಣ ಉಂಟಾದರೆ ಪರೀಕ್ಷೆ ನಡೆಸೆ ಆಯಂಟಿಬಯೋಟಿಕ್ ಮಾತ್ರೆಗಳನ್ನು ಬಳಸದಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಎಚ್ಚರಿಕೆ ನೀಡಿದೆ.

About Author

Leave a Reply

Your email address will not be published. Required fields are marked *

You may have missed