ಐವರು ಶಂಕಿತ ಉಗ್ರರು 7 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ

0

ಬೆಂಗಳೂರು: ಬೆಂಗಳೂರಿನಲ್ಲಿ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ 5 ಜನ ಶಂಕಿತ ಉಗ್ರರನ್ನು ಕೋರ್ಟ್ ಗೆ ಕರೆ ತಂದ ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗೆ 7 ದಿನ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.
ಟಾರ್ಗೆಟ್ ಬೆಂಗಳೂರು: ಶಂಕಿತ ಉಗ್ರರು ಬೆಂಗಳೂರು ಸಿಟಿಯನ್ನೇ ಟಾರ್ಗೆಟ್ ಮಾಡಿದ್ದರು. ಪೊಲೀಸರ ಮಾಹಿತಿ ಪ್ರಕಾರ ಅರೆಸ್ಟ್ ಆದ ಎಲ್ಲಾ ಶಂಕಿತರು ಬೆಂಗಳೂರು ಸ್ಥಳೀಯ ನಿವಾಸಿಗಳೇ ಆಗಿದ್ದಾರೆ. ಉಗ್ರರ ಜೊತೆ ಕಾಂಟ್ಯಾಕ್ಟ್ ಆಗಿ ವಿಧ್ವಂಸಕ ಕೃತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದರು. ಬೆಂಗಳೂರಿನಲ್ಲಿ ಎಲ್ಲೆಲ್ಲಿ ಬ್ಲಾಸ್ಟ್ ಮಾಡಬೇಕು? ಏನು ಅನ್ನೋದರ ಬಗ್ಗೆಯೂ ಟ್ರೈನಿಂಗ್ ಪಡೆದಿದ್ದರು. ಶಂಕಿತರ ಟೀಂ ಎಲ್ಲಾ ಕಡೆಯೂ ಆಕ್ಟೀವ್ ಆಗಿತ್ತು. ಬೆಂಗಳೂರಿನ ಸುಮಾರು ಹತ್ತು ಕಡೆ ಬ್ಲಾಸ್ಟಿಂಗ್ ಗೆ ಪ್ಲಾನ್ ಮಾಡಿದ್ದ ಮಾಹಿತಿ ಸಿಕ್ಕಿದೆ. ಎಲ್ಲಾ ಪ್ಲಾನ್ ಮಾಡಿಕೊಂಡು ಎಕ್ಸಿಕ್ಯೂಟ್ಗೆ ಕಾಯುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

About Author

Leave a Reply

Your email address will not be published. Required fields are marked *

You may have missed