ಇನ್ಮುಂದೆ ಬೆಂಗಳೂರಿಂದ ಮಂಗಳೂರಿಗೆ ಬೇಗ ರೀಚ್ ಆಗ್ಬುದು! ಹೇಗೆ ಅಂತೀರಾ?ಇಲ್ಲಿದೆ ನೋಡಿ!

0

ಬೆಂಗಳೂರು: ಮೈಸೂರು-ಕುಶಾಲನಗರ (Mysuru-Kushalanagara Four Lane Highway) ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ಬೆಂಗಳೂರು-ಮಂಗಳೂರು (Bengaluru-Mangaluru) ರಸ್ತೆ ಸಂಚಾರಕ್ಕೆ ವೇಗ ಕಲ್ಪಿಸುವ ಕಾಲ ಸನ್ನಿಹಿತವಾಗಿದೆ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಇದರಿಂದ ಹಲವು ವರ್ಷಗಳ ಬೇಡಿಕೆಯಾಗಿದ್ದ ಕುಶಾಲನಗರದಿಂದ ಮಾಣಿವರೆಗಿನ ರಸ್ತೆ ಚತುಷ್ಪಥವಾಗುವ ಕನಸು ನನಸಾಗುತ್ತಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ಪ್ರಯಾಣದ ಸಮಯ ಇಳಿಕೆಯಾಗಲಿದೆ.

ಮೊದಲ ಹಂತವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway) ಇಂದು ಲೋಕಾರ್ಪಣೆಗೊಂಡಿತು. ಈ ಯೋಜನೆಯಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಕ್ಕಂತಾಗಿದೆ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯ 3 ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆ ಹಾಗೂ ಕೃಷಿ ಚಟುವಟಿಕೆ ಅಭಿವೃದ್ಧಿಗೂ ಪ್ರೋತ್ಸಾಹ ದಕ್ಕಿದಂತಾಗಿದೆ.

About Author

Leave a Reply

Your email address will not be published. Required fields are marked *

You may have missed