ಕೊಡಿಗೇಹಳ್ಳಿ ಸರ್ಕಾರಿ ಜಮೀನು ಒತ್ತುವರಿ: 8 ಜನರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

0

ಬೆಂಗಳೂರು: ಬೆಂಗಳೂರಿನ ಯಲಹಂಕದ ಕೊಡಿಗೇಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡ ಅಧಿಕಾರಿಗಳು ಸೇರಿ 8 ಜನರ ವಿರುದ್ಧ ಕ್ರಮಕ್ಕೆ ಬಿಡಿಎ ಆಯುಕ್ತರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಸರ್ಕಾರಿ ಜಾಗದ ಒತ್ತುವರಿಯನ್ನು ತೆರವುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕೊಡಿಗೆಹಳ್ಳಿಯ ನಿವಾಸಿ ಅಶ್ವತ್ಥ ನಾರಾಯಣ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.ವಿಚಾರಣೆ ವೇಳೆ ಸರ್ಕಾರದ ಸರ್ಕಾರಿ ವಕೀಲರಾದ ಪ್ರತಿಮಾ ಹೊನ್ನಾಪುರ,

ಈ ಹಿಂದೆ ಹೈಕೋರ್ಟ್ ನಿರ್ದೇಶನದ ಮೇರೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಒತ್ತುವರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಜತೆಗೆ, ಯಲಹಂಕ ತಹಶೀಲ್ದಾರ ಅವರು ಸಲ್ಲಿಸಿದ್ದ ಪ್ರಮಾಣ ಪತ್ರವನ್ನು ಸಲ್ಲಿಸಿದರು. ಇದನ್ನು ಪರಿಶೀಲಿಸಿದ ನ್ಯಾಯಪೀಠ, ಸರ್ಕಾರಿ ಜಮೀನಿನ ಒತ್ತುವರಿಗೆ ಕಾರಣವಾದ ಬಿಡಿಎ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಡಿಎ ಆಯುಕ್ತರಿಗೆ ನಿರ್ದೇಶನ ನೀಡಿತು. ಜತೆಗೆ, ಮುಂದಿನ 15 ದಿನಗಳಲ್ಲಿ ಒತ್ತುವರಿ ತೆರವು ಮಾಡಿ ವರದಿ ಸಲ್ಲಿಸುವಂತೆ ಯಲಹಂಕ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿತು.

About Author

Leave a Reply

Your email address will not be published. Required fields are marked *

You may have missed