7ನೇ ವೇತನ ಆಯೋಗ ಅವಧಿ 6 ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶ..!

0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ಮತ್ತು ನೂತನ ವೇತನ ಶ್ರೇಣಿ ರಚಿಸುವ ಉದ್ದೇಶದಿಂದ ನಿವೃತ್ತ ಸಿ.ಎಸ್.ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ (7th State Pay Commission) ಅವಧಿ ವಿಸ್ತರಣೆ ಮಾಡಲಾಗಿದೆ.

ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. 2022ರ ನ. 19ರಂದು ವೇತನ ಆಯೋಗ ರಚನೆಯಾಗಿತ್ತು. ಆಯೋಗದ ಶಿಫಾರಸ್ಸು ಆಧರಿಸಲು ಮುಂದಿನ ಕ್ರಮ ಕೈಗೊಳ್ಳಲು 2023-24ನೇ ಸಾಲಿನಲ್ಲಿ ಹಣವನ್ನೂ ತೆಗೆದಿಡಲಾಗಿತ್ತು.

ಮಾರ್ಚ್​ ಒಳಗೆ ಮಧ್ಯಂತರ ವರದಿ ಪಡೆದು ಅವಲೋಕಿಸಿ 2023-24ರಲ್ಲಿಯೇ ಜಾರಿಗೊಳಿಸಲು ಸಿದ್ಧರಿದ್ದೇವೆ ಎಂದು ಈ ಹಿಂದೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿ ಸಭೆಯಲ್ಲಿ 7ನೇ ವೇತನ ಆಯೋಗದಲ್ಲಿ ಹಳೇ ಪಿಂಚಣಿ ನೀತಿ​ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ ಫೆಬ್ರವರಿ 22ರಿಂದ 7 ದಿನಗಳ ಗಡುವು ನೀಡಿತ್ತು.

ಒಂದು ವೇಳೆ ಗಡುವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಎಚ್ಚರಿಕೆ ನೀಡಿದ್ದರು. ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1ರಿಂದಲೇ ಕರ್ತವ್ಯಕ್ಕೆ ಗೈರಾಗಲು ನೌಕರರು ಸಭೆಯಲ್ಲಿ ನಿರ್ಧಾರಿಸಿದ್ದರು.

ತುರ್ತು ಕಾರ್ಯಕಾರಿಣಿ ಸಭೆಯಲ್ಲಿ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ​ ವಂದಿತಾ ಶರ್ಮಾ ಅವರಿಗೆ ತಿಳಿವಳಿಕೆ ಮತ್ತು ಮನವಿ ಪತ್ರ ಸಲ್ಲಿಸಲು ನಿರ್ಧಾರ ಮಾಡಲಾಗಿತ್ತು. ಇದೇ ವೇಳೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಮಾತನಾಡಿ, ಮಾರ್ಚ್​​ 1ರಿಂದ ಬೆಂಗಳೂರಿನಲ್ಲಿ ಕಸ ಎತ್ತದಿರಲು ತೀರ್ಮಾನಿಸಲಾಗಿತ್ತು. ಅಲ್ಲದೆ, ಹಳೇ ಪಿಂಚಣಿ ನೀತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ ಎಂದಿದ್ದರು.

About Author

Leave a Reply

Your email address will not be published. Required fields are marked *

You may have missed