ಮುರುಘಾಮಠದ ಆಡಳಿತಾಧಿಕಾರಿ ನೇಮಕ ಅಧಿಕಾರ ಸರ್ಕಾರಕ್ಕೆ ಇಲ್ಲ: ಹೈಕೋರ್ಟ್

0

ಬೆಂಗಳೂರು: ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಬೆಂಗಳೂರಿನ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ನ್ಯಾ.ಕೃಷ್ಣ ದೀಕ್ಷೀತ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿದ್ದು, ಮುರುಘಾಮಠಕ್ಕೆ ವೀರಶೈವ ಮುಖಂಡರು, ಸಮಾಜದ ಪ್ರಮುಖರು ಆಡಳಿತ ನಡೆಸಬಹುದು.

4 ವಾರಗಳ ಮಾತ್ರ ಆಡಳಿತಾಧಿಕಾರಿ ಮುಂದುವರೆಯಬಹುದು.

4 ವಾರಗಳ ನಂತರ ಆಡಳಿತಾಧಿಕಾರಿಗೆ ಅಧಿಕಾರ ಇಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಈ ಸಂಬಂಧ ಡಾ. ಶಿವಮೂರ್ತಿ ಮುರುಘಾಶ್ರೀ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆಡಳಿತಾಧಿಕಾರಿ ನೇಮಿಸುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠ, ಸರ್ಕಾರಕ್ಕೆ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಇಲ್ಲ ಎಂದು ಹೇಳಿದೆ.

About Author

Leave a Reply

Your email address will not be published. Required fields are marked *

You may have missed