ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿರುವ ಗುಬ್ಬಿ ಶ್ರೀನಿವಾಸ್

0

ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಾಳೆ ಗುಬ್ಬಿ ಶ್ರೀನಿವಾಸ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಲ್ಲಿಸಲಿದ್ದರು.

ನಾನು ಸ್ವಯಿಚ್ಛೆಯಿಂದ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ತಾವುಗಳು ದಯಮಾಡಿ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಕರ್ನಾಟಕ ವಿಧಾಸಭೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿಕೊಂಡಿದ್ದರು.

ಅದರಂತೆ ರಾಜೀನಾಮೆ ಅಂಗೀಕಾರ ಮಾಡಲಾಗಿದ್ದು, ಇದೀಗ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಇನ್ನೂ ತಮ್ಮ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವಿನ ಸಂಬಂಧ ಅಣ್ಣತಮ್ಮಂದಿರಂತಿತ್ತು. ಸುಮಾರು ಒಂದೂವರೆ ವರ್ಷಗಳ ಹಿಂದೆ ಆ ಸಂಬಂಧಕ್ಕೆ ಯಾರೋ ಹುಳಿ ಹಿಂಡಿದರು. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದು ನಿನ್ನೆ ಗುಬ್ಬಿ ಶ್ರೀನಿವಾಸ್ ಹೇಳಿಕೆ ನೀಡಿದರು.

About Author

Leave a Reply

Your email address will not be published. Required fields are marked *

You may have missed