ಲೋಕಸಭೆ ಚುನಾವಣೆಗೆ ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ‌ ಇದೆ: HD ದೇವೇಗೌಡ

0

ಬೆಂಗಳೂರು: ಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ ಎಂದು ಹೆಚ್​​ಡಿ ದೇವೇಗೌಡರು ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಜೆಪಿ ಭವನದಲ್ಲಿ ಮಾತನಾಡಿದ ಅವರು, ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ‌ ಇದೆ ಎಂದರು.

ಇನ್ನೂ ಲೋಕಸಭೆ ಚುನಾವಣೆ ಬಗ್ಗೆ ಈಗಲೇ ಚರ್ಚೆ ಮಾಡಲು ಹೋಗಲ್ಲ.

ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕಡೆ ಅಭ್ಯರ್ಥಿ ಹಾಕಬೇಕು. ಎಲ್ಲೆಲ್ಲಿ ಸ್ಪರ್ಧಿಸಬೇಕೆಂದು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತೇವೆ.

ಲೋಕಸಭೆ ಚುನಾವಣೆಗೂ ಮುನ್ನ ಸ್ಥಳೀಯ ಚುನಾವಣೆಗೆ ತಯಾರಿ ನಡೆಸುತ್ತೇವೆ ಎಂದರು. ನಾವು ಎರಡು ಬಾರಿ ಕಾಂಗ್ರೆಸ್​​ಗೆ ಬೆಂಬಲ ಕೊಟ್ಟಿದ್ದೇವೆ. ಮುಂದೆ ಪಕ್ಷ ಹೇಗೆ ಅಭಿವೃದ್ಧಿ ಮಾಡಬೇಕು, ಪಕ್ಷ ಉಳಿಬೇಕಾದರೇ ಏನ್ ಮಾಡಬೇಕು.

ಎಲ್ಲದರ ಬಗ್ಗೆ ಮುಖಂಡರು ಚರ್ಚೆ ಮಾಡುತ್ತೇವೆ. ನಮ್ಮ ಶಕ್ತಿ ನಮ್ಮ ಕಾರ್ಯಕರ್ತರು. ಯುವಕರಿಗೆ ಹೆಚ್ಚು ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

About Author

Leave a Reply

Your email address will not be published. Required fields are marked *

You may have missed