ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಜರುಗಲಿರುವ ಎಸ್​ಸಿಒ ಶೃಂಗಸಭೆ

0

ವದೆಹಲಿ ;- ಇಂದು ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ಎಸ್​ಸಿಒ ಶೃಂಗಸಭೆ ಜರುಗಲಿದೆ. ಈ ಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಸೇರಿದಂತೆ ಎಲ್ಲಾ ಎಂಟು ದೇಶಗಳ ನಾಯಕರು ಭಾಗವಹಿಸಲಿದ್ದಾರೆ.

ಇದೇ ವೇಳೆ ಒಕ್ಕೂಟದ ಒಂಬತ್ತನೇ ಸದಸ್ಯ ರಾಷ್ಟ್ರವನ್ನಾಗಿ ಇರಾನ್​ ಅನ್ನು ಸೇರ್ಪಡೆಗೊಳಿಸಲಾಗುತ್ತಿದೆ.

ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಆರಂಭ ಆಗಲಿದೆ. ಸದ್ಯ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಇರಾನ್ ಅನ್ನು ಒಕ್ಕೂಟದ ಒಂಬತ್ತನೇ ಸದಸ್ಯ ರಾಷ್ಟ್ರವನ್ನಾಗಿ ಸೇರ್ಪಡೆ ಮಾಡಲಾಗುತ್ತಿದೆ. ಈ ಒಕ್ಕೂಟದಲ್ಲಿ ಬೆಲಾರಸ್ ಸೇರ್ಪಡೆಗೆ ರಷ್ಯಾ ಬಲವಾಗಿ ಬೆಂಬಲ ನೀಡಿದೆ. ಇದಲ್ಲದೇ ಅಫ್ಘಾನಿಸ್ತಾನ ಮತ್ತು ಮಂಗೋಲಿಯಾ ದೇಶಗಳು ಕೂಡ ಎಸ್​ಸಿಒಗೆ ಸೇರಲು ಬಯಸುತ್ತಿವೆ. ಆದರೆ ಬೆಲಾರಸ್ ಮತ್ತು ಮಂಗೋಲಿಯಾವನ್ನು ವೀಕ್ಷಕ ರಾಜ್ಯಗಳಾಗಿ ಆಹ್ವಾನಿಸಲಾಗಿದೆ. ಮಾಹಿತಿ ಪ್ರಕಾರ, ತುರ್ಕಮೆನಿಸ್ತಾನವನ್ನು ಸಹ ಅತಿಥಿಯಾಗಿ ಆಹ್ವಾನಿಸಲಾಗಿದೆ.

1996ರಲ್ಲಿ ರೂಪುಗೊಂಡ ಈ ಒಕ್ಕೂಟದಲ್ಲಿ ಭಾರತ 2017ರಲ್ಲಿ ಪೂರ್ಣ ಸದಸ್ಯತ್ವವನ್ನು ಪಡೆಯಿತು. ಇದೀಗ ಮೊದಲ ಬಾರಿ ಭಾರತ ಎಸ್​ಸಿಒ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸುತ್ತಿದೆ.

About Author

Leave a Reply

Your email address will not be published. Required fields are marked *

You may have missed