ಬೆಂಗಳೂರಿನಲ್ಲಿ ಮುಂದಿನ ಎರಡ್ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ

0

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ,

ತುಮಕೂರಿನಲ್ಲಿ ಮಳೆಯಾಗಲಿದೆ. ಇನ್ನೂ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

About Author

Leave a Reply

Your email address will not be published. Required fields are marked *

You may have missed