ರಾಜ್ಯದ ವಿವಿಧೆಡೆ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ

0

ಬೆಂಗಳೂರು ;– ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಧಾರವಾರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ,ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್​ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

About Author

Leave a Reply

Your email address will not be published. Required fields are marked *

You may have missed