ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

0

ಬೆಂಗಳೂರು ;- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸಸಲಿದೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಆಗಾಗ ಮಳೆಯಾಗಲಿದೆ.

ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

About Author

Leave a Reply

Your email address will not be published. Required fields are marked *

You may have missed