ಸಿಲಿಕಾನ್ ಸಿಟಿಯಲ್ಲಿ ಎರಡು ದಿನ ಗುಡುಗು ಸಹಿತ ಭಾರಿ ಮಳೆ

0

ಬೆಂಗಳೂರುರಾಜ್ಯ ರಾಜಧಾನಿ ಬೆಂಗಳೂರು (Bangalore rain) ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಬಿರುಗಾಳಿ ಜೊತೆ ಸಾಧಾರಣ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು,

ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚು ಆಗುವ ಸಾಧ್ಯತೆ ಇದೆ. ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಆಗುವ ಸಾಧ್ಯತೆ ಇದೆ. ಅದೇ ರೀತಿ, ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಆಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿಎರಡುದಿನಗುಡುಗುಮಳೆ (Bengaluru rain)

ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾರವಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಬಿರುಗಾಳಿ ಸಹಿತ ಹಗುರದಿಂದ ಗುಡುಗು ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿಯೂ ಇದು ಮುಂದುವರಿಯುವ ಸಾಧ್ಯತೆ ಇದೆ.

About Author

Leave a Reply

Your email address will not be published. Required fields are marked *

You may have missed