ಇಂದು ರಾತ್ರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ.! ಹವಾಮಾನ ಮುನ್ಸೂಚನೆ

0

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಇಂದು ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಕೋಲಾರ, ಬಳ್ಳಾರಿ, ಕೊಡಗು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

 

ಉಳಿದಂತೆ ಧಾರವಾಡ, ಗದಗ, ಕಲಬುರ್ಗಿ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲೂ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕಳೆದ ಕೆಲ ದಿನಗಳಿಂದ ರಾಜಧಾನಿ ಬೆಂಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಿತ್ತು. ಬಿಸಿಲಿನ ಝಳಕ್ಕೆ ಜನರು ಕಂಗೆಟ್ಟಿದ್ದರು. ಸದ್ಯ ಮಳೆಯ ನಿರೀಕ್ಷೆ ಇರುವುದರಿಂದ ಬಿಸಿಲ ಧಗೆ ತಂಪಾಗುವ ನಿರೀಕ್ಷೆಯಿದೆ.

About Author

Leave a Reply

Your email address will not be published. Required fields are marked *

You may have missed