ಫ್ಲೆಕ್ಸ್ ಬ್ಯಾನರ್ ಅಳವಡಿಸುವವರ ವಿರುದ್ಧ ಕ್ರಮ ಕೈಗೊಳ್ಳದ BBMPಗೆ ಹೈಕೋರ್ಟ್ ತೀವ್ರ ತರಾಟೆ

0

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೆಕ್ಸ್ ಬ್ಯಾನರ್ ಅಳವಡಿಸುವವರ ವಿರುದ್ಧ ಕ್ರಮ ಕೈಗೊಳ್ಳದ ಬಿಬಿಎಂಪಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಫ್ಲೆಕ್ಸ್ ಬ್ಯಾನರ್‌ಗಳ ಮೂಲಕ ನಗರದ ಸೌಂದರ್ಯವನ್ನು ಹಾಳು ಮಾಡುವವರ ವಿರುದ್ಧ ಕ್ರಮಕ್ಕೆ ಮುಂದಾಗ ಬಿಬಿಎಂಪಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠ,

ಪಾಲಿಕೆ ಕೇವಲ ನಾಮಕವಾಸ್ತೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿತು. ನ್ಯಾಯಾಲಯದ ಆದೇಶ ಆದೇಶ ಪಾಲಿಸಿರುವ ಬಗ್ಗೆ ಬಿಬಿಎಂಪಿ ಮಾ.15 ರಂದು ಸಲ್ಲಿಸಿರುವ ಅನುಪಾಲನಾ ವರದಿ ಒಂದಿಷ್ಟು ಸಮಾಧಾನ ತಂದಿಲ್ಲ. ಆದ್ದರಿಂದ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ಹಾಗೂ ಇತರೆ ಫಲಕಗಳನ್ನು ತೆರವುಗೊಳಿಸಿರುವ ಮತ್ತು ತಪ್ಪಿತಸ್ಥರ ವಿರುದ್ಧ ಕೈಗೊಳ್ಳಬೇಕಾಗಿರುವ ಕ್ರಮಗಳ ಸಮಗ್ರ ವರದಿಯನ್ನು ನಾಲ್ಕು ವಾರಗಳಲ್ಲಿ ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

About Author

Leave a Reply

Your email address will not be published. Required fields are marked *

You may have missed