Hindenburg Research report: ತನಿಖೆಯ ವರದಿಯನ್ನು ನೀಡುವಂತೆ SEBIಗೆ ಸುಪ್ರೀಂ ಸೂಚನೆ

0

ವದೆಹಲಿ: ಅದಾನಿ ಸಮೂಹ ಸಂಸ್ಥೆಗಳ (Adani Group of companies) ವಿರುದ್ಧದ ಹಿಂಡನ್‍ಬರ್ಗ್ ಸಂಶೋಧನಾ ವರದಿಯಲ್ಲಿನ (Hindenburg Research report) ಆರೋಪಗಳ ಕುರಿತಾದ ತನಿಖೆಯ ಸ್ಥಿತಿಗತಿಯ ವರದಿಯನ್ನು ಆಗಸ್ಟ್ 14 ರಂದು ನೀಡುವಂತೆ ಸೆಬಿಗೆ (SEBI) ಸುಪ್ರೀಂ ಕೋರ್ಟ್ (Supreme Court) ಬುಧವಾರ ಸೂಚಿಸಿದೆ.

 

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ (DY Chandrachud), ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಈ ಆದೇಶವನ್ನು ನೀಡಿದೆ. ಆದೇಶ ವೇಳೆ ನ್ಯಾಯಾಲಯ ಸೆ.30ರ ವರೆಗೂ ತನಿಖೆಗೆ ಅವಕಾಶ ನೀಡಬಹುದು ಆದರೆ ನಿಗದಿಪಡಿಸಲಾದ ಅವಧಿಯಲ್ಲಿ ತನಿಖೆಯ ಪ್ರಗತಿಯನ್ನು ತಿಳಿಸಬೇಕು ಎಂದು ಸಿಜೆಐ ಸೂಚಿಸಿದರು.

ಹಿಂಡನ್‍ಬರ್ಗ್ ವರದಿಯಲ್ಲಿ ಉಲ್ಲೇಖಿಸಲಾದ 12 ಸಂಶಯಾಸ್ಪದ ವಹಿವಾಟುಗಳ ತನಿಖೆಗೆ ಕನಿಷ್ಠ 15 ತಿಂಗಳ ತನಿಖೆ ಅಗತ್ಯವಿದೆ. ಆದರೆ ಆರು ತಿಂಗಳು ಅವಕಾಶ ವಿಸ್ತರಿಸಿದರೆ ತನಿಖೆ ಪೂರ್ಣಗೊಳಿಸುವುದಾಗಿ ಕಳೆದ ತಿಂಗಳು ಸೆಬಿ ಸಲ್ಲಿಸಿದ್ದ ಮನವಿಯಲ್ಲಿ ಹೇಳಿತ್ತು. ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕೋರ್ಟ್ 6 ತಿಂಗಳ ಕಾಲಾವಕಾಶವನ್ನು ನೀಡಲು ನಿರಾಕರಿಸಿತ್ತು. ನಿವೃತ್ತ ನ್ಯಾಯಮೂರ್ತಿ ಎಎಂ ಸಪ್ರೆ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಬೇಸಿಗೆಯ ರಜೆಯ ನಂತರ ಪ್ರಕರಣದ ವಿಚಾರಣೆಗೆ ಎತ್ತಿಕೊಳ್ಳಲಾಗುವುದು ಎಂದು ಕೋರ್ಟ್ ಹೇಳಿದೆ.

ಇಂದಿನ ವಿಚಾರಣೆ ವೇಳೆ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿ, ಇದು ಕಂಪನಿಯನ್ನು ರಕ್ಷಿಸುವ ಸ್ಪಷ್ಟ ಪ್ರಯತ್ನವಾಗಿದೆ ಎಂದು ಸೆಬಿಯ ವಿರುದ್ಧ ಆರೋಪಿಸಿದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರತಿ ವಾದಿಸಿ ತನಿಖೆ ನಡೆಸಲು ಸೆಬಿಗೆ ಅವಕಾಶವಿದೆ. ತನಿಖೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದೆ ಎಂದು ಹೇಳಿದರು.

About Author

Leave a Reply

Your email address will not be published. Required fields are marked *

You may have missed