HIV ಸೋಂಕು – ಮನನೊಂದು ರೋಗಿ ಆತ್ಮಹತ್ಯೆ

0

ಬೀದರ್: ಹೆಚ್‌ಐವಿ (HIV) ಸೋಂಕಿಗೆ ಮನನೊಂದು ರೋಗಿ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೀದರ್ (Bidar) ಜಿಲ್ಲೆಯಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ತ್ರಿಪುರಾಂತದಲ್ಲಿ ಈ ಘಟನೆ ನಡೆದಿದ್ದು, ರಮೇಶ್ ಮಡಿವಾಳ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಲವು ವರ್ಷಗಳಿಂದ ಹೆಚ್‌ಐವಿ ರೋಗಕ್ಕೆ ತುತ್ತಾಗಿದ್ದ ರಮೇಶ್ ಮನನೊಂದು ಬುಧವಾರ ಯಾರೂ ಇಲ್ಲದ ವೇಳೆ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ನಗರ ಠಾಣೆಯ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed