ಗ್ಯಾರಂಟಿಗಳನ್ನೇ ಹಿಡಿದುಕೊಂಡು ಕಾಂಗ್ರೆಸ್ ಲೋಕಸಭಾ ಚುನಾವಣೆಗಾಗಿ ಕಸರತ್ತು!

0

 ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳು ದೊಡ್ಡ ಮಟ್ಟದಲ್ಲಿ ಲಾಭವನ್ನು ತಂದುಕೊಟ್ಟಿದ್ದವು. 135 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಪ್ರಧಾನಿ ಮೋದಿ ಸರಣಿ ರೋಡ್ ಶೋಗಳನ್ನು ನಡೆಸಿದ್ದರೂ ಅದು ದೊಡ್ಡ ಮಟ್ಟದಲ್ಲಿ ಪ್ರಭಾವವನ್ನು ಬೀರಿಲ್ಲ.

ಸರ್ಕಾರ ಬಂದ ಬೆನ್ನಲ್ಲೇ ಐದು ಗ್ಯಾರಂಟಿ ಘೋಷಣೆಗಳನ್ನು ಜಾರಿಗೊಳಿಸಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿದ್ದವು.

ಇದೀಗ ನಾವು ನುಡಿದಂತೆ ನಡೆದಿದ್ದೇವೆ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿದೆ. ಇದನ್ನು ಮುಂದಿನ ಲೋಕಸಭಾ ಚುನಾವಣೆಗೆ ಸಕರಾತ್ಮಕ ಅಸ್ತ್ರವನ್ನಾಗಿ ಪ್ರಯೋಗ ಮಾಡಲು ಕಾಂಗ್ರೆಸ್ ನಿರ್ಧಾರ ಮಾಡಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಕೇವಲ ಒಂದು ಸ್ಥಾನವನ್ನು ಮಾತ್ರ ಗಳಿಸಿಕೊಂಡಿತ್ತು. ಆದರೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆಯತ್ತ ಚಿತ್ತ ನೆಟ್ಟಿದೆ.

ಇದೀಗ ಸರ್ಕಾರದ ಗ್ಯಾರಂಟಿ ಘೋಷಣೆಗಳ ಜಾರಿ ಮಾಡಿರುವುದನ್ನು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡುವ ಮೂಲಕ ಜನರ ಗಮನ ಸೆಳೆಯುವುದು ಕಾಂಗ್ರೆಸ್ ತಂತ್ರಗಾರಿಕೆ ಆಗಿದೆ. ಜೊತೆಗೆ ಬಿಜೆಪಿ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ, ಹಾಗೂ ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಮುಂದಿಟ್ಟುಕೊಂಡು ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಆದರೆ ಇವೆಲ್ಲವೂ ಎಷ್ಟರ ಮಟ್ಟಿಗೆ ಪರಿಣಾಮ ಬೀರಲಿದೆ ಎಂಬುವುದು ಮಾತ್ರ ಸದ್ಯದ ಕುತೂಹಲವಾಗಿದೆ.

About Author

Leave a Reply

Your email address will not be published. Required fields are marked *

You may have missed