ಬಿಸಿ ಕೆಂಡವಾದ ಆಂಧ್ರ ಪ್ರದೇಶ: ಜನಜೀವನ ಅಸ್ತವ್ಯಸ್ತ..!

0

ನೆಲ್ಲೂರು ಜಿಲ್ಲೆಯ ಕೊಂಡಪುರಂನಲ್ಲಿ ಗರಿಷ್ಠ 46.4 ಡಿಗ್ರಿ ತಾಪಮಾನ ದಾಖಲಾಗಿದೆ. ಆಂಧ್ರ ಪ್ರದೇಶದ 9 ಮಂಡಲ ಪ್ರದೇಶಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಇತರೆ 194 ಪ್ರದೇಶಗಳಲ್ಲೂ ಶಾಖದ ತರಂಗಗಳು ಏಳಲಿವೆ ಎಂದು ಎಪಿ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಸೋಮವಾರ ನೆಲ್ಲೂರು ಜಿಲ್ಲೆಯ ಕೊಂಡಾಪುರದಲ್ಲಿ ಗರಿಷ್ಠ 46.4 ಡಿಗ್ರಿ ಸೆಲ್ಸಿಯಸ್ ಹಾಗೂ ಪ್ರಕಾಶಂ ಜಿಲ್ಲೆಯಲ್ಲಿ 46.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಶ್ರೀಕಾಕುಳಂ, ವಿಜಯನಗರಂ, ಪಾರ್ವತಿಪುರಂ ಮಾನ್ಯಂ, ಅಲ್ಲೂರಿ ಸೀತಾರಾಮರಾಜು, ಅನಕಾಪಲ್ಲಿ, ಕಾಕಿನಾಡ, ಕೋನಸೀಮಾ, ಉಭಯಗೋದಾವರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು 45°C ರಿಂದ 48°C ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ವಿಶಾಖಪಟ್ಟಣಂ, ಕರ್ನೂಲ್, ನಂದ್ಯಾಲ್, ಅನಂತಪುರ, ವೈಎಸ್‌ಆರ್, ಅನ್ನಮಯ್ಯ, ಚಿತ್ತೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ 42°C ರಿಂದ 44°C ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

ಶ್ರೀ ಸತ್ಯಸಾಯಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ 41 ಡಿಗ್ರಿ ಸೆಲ್ಸಿಯಸ್ ವರೆಗಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.ಜನರು ಜಾಗರೂಕರಾಗಿರಬೇಕು, ವಿಶೇಷವಾಗಿ ವೃದ್ಧರು, ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದು ಕೊಳ್ಳಬೇಕು. ಪ್ರಯಾಣಿಸುವಾಗಲೂ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಎಪಿ ವಿಪತ್ತು ನಿರ್ವಹಣಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಿಆರ್ ಬಿಆರ್ ಅಂಬೇಡ್ಕರ್ ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed