ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಪತಿ ಸಾವು..!

0

ಬೆಂಗಳೂರು: ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಪತಿ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bangalore) ನಡೆದಿದೆ. ಇದೇ ವೇಳೆ ಪತ್ನಿಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.

ಬನ್ನೇರುಘಟ್ಟ ಸಮೀಪದ ವಡ್ಡರಪಾಳ್ಯದಲ್ಲಿ ಘಟನೆ ಜರುಗಿದೆ. ಸಂತೋಷ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಪತ್ನಿ ಭಾನು ಗಾಯಾಳು. ಆಗಾಗ ಪತಿ-ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದ್ದು, ಗುರುವಾರ ಇಬ್ಬರ ನಡುವೆ ಗಲಾಟೆ ತಾರಕಕ್ಕೇರಿದೆ. ಈ ಹಿಂದೆಯೇ ಪೆಟ್ರೋಲ್ ಖರೀದಿಸಿ ತಂದಿದ್ದ ಪತಿ ಸಂತೋಷ್, ತಾನು ಪೆಟ್ರೋಲ್ ಸುರಿದುಕೊಂಡು ಪತ್ನಿಗೂ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಮೃತಪಟ್ಟಿದ್ದು, ಮಹಿಳೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

About Author

Leave a Reply

Your email address will not be published. Required fields are marked *

You may have missed