ನಾನೂ ಕೂಡ ಮೋದಿ ಅಭಿಮಾನಿ: ಎಲಾನ್ ಮಸ್ಕ್

0

ನ್ಯೂಯಾರ್ಕ್: ನಾನು ಕೂಡ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಭಿಮಾನಿ ಎಂದು ಟೆಸ್ಲಾ ಸಿಇಒ ಹಾಗೂ ಟ್ವಿಟ್ಟರ್ ಮಾಲೀಕ ಎಲಾನ್ ಮಸ್ಕ್ ಹೇಳಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ಮೋದಿಯವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಲಾನ್ ಮಸ್ಕ್, ಈ ಭೇಟಿ ನನಗೆ ರೋಮಾಂಚನಕಾರಿ ಅನುಭವ ನೀಡಿದೆ.

ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು. ಇದರಿಂದಾಗಿ ಅವರ ಬಗ್ಗೆ ನನಗೆ ತಿಳಿದಿದೆ. ಅವರು ನನಗೆ ಭಾರತಕ್ಕೆ ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದರು.

ಮೋದಿಯವರು ನಿಜವಾಗಿಯೂ ಭಾರತದ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಾರೆ. ಅಲ್ಲದೇ ಅವರು ಸರಿಯಾದ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತಾರೆ. ಈಗ ತಮ್ಮ ದೇಶದಲ್ಲಿ ಹೂಡಿಕೆ ಮಾಡಲು ನಮ್ಮನ್ನು ಒತ್ತಾಯಿಸುತ್ತಿದ್ದಾರೆ. ಇದು ಭಾರತದ ಅಭಿವೃದ್ಧಿಗೆ ಸಹಕಾರವಾಗಲಿದೆ. ಇದೇ ವರ್ಷದಲ್ಲಿ ಟೆಸ್ಲಾ ಕಾರ್ಖಾನೆಯನ್ನು ಭಾರತದಲ್ಲಿ ಸ್ಥಾಪಿಸಲು ಸ್ಥಳವನ್ನು ಗುರುತಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

About Author

Leave a Reply

Your email address will not be published. Required fields are marked *

You may have missed