8 ಸಾವಿರ ಕೋಟಿ ರೂ. ಹೂಡಿಕೆಗೆ ಕರ್ನಾಟಕದಲ್ಲಿ ಐಬಿಸಿ ಕಂಪೆನಿ ಒಲವು

0

ಬೆಂಗಳೂರು ;- ಕರ್ನಾಟಕದಲ್ಲಿ 8 ಸಾವಿರ ಕೋಟಿ ರೂ. ಹೂಡಿಕೆಗೆ ಐಬಿಸಿ ಕಂಪೆನಿ ಒಲವು ತೋರಿದ್ದು, ಈ ಸಂಬಂಧ ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಕಂಪೆನಿಯ ಉನ್ನತ ಪ್ರತಿನಿಧಿಗಳೊಂದಿಗೆ ಸೋಮವಾರ ಪ್ರಾಥಮಿಕ ಸುತ್ತಿನ ಮಾತುಕತೆ ನಡೆಸಿದರು.

ವಿದ್ಯುತ್‌ ಚಾಲಿತ ವಾಹನಗಳ ಕ್ಷೇತ್ರ ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿದೆ. ಆದರೆ ನಮ್ಮಲ್ಲಿ ಲೀಥಿಯಂ ಕೋಶಗಳ ಉತ್ಪಾದನೆ ನಡೆಯುತ್ತಿಲ್ಲ. ಐಬಿಸಿ ಕಂಪನಿ ಈ ನಿಟ್ಟಿನಲ್ಲಿ ಮುಂದೆ ಬಂದಿರುವುದು ಸ್ವಾಗತಾರ್ಹ. ಕಂಪೆನಿಯು ದೇವನಹಳ್ಳಿಯ ಬಳಿಯಿರುವ ಐಟಿಐಆರ್​ ಪಾರ್ಕ್‌ನಲ್ಲಿ 100 ಎಕರೆ ಜಮೀನನ್ನು ಕೇಳಿದೆ. ಕಂಪನಿ ಕೇಳಿರುವ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆಗೂ ವಿಸ್ತೃತವಾಗಿ ಚರ್ಚಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಐಬಿಸಿ ಕಂಪನಿಯ ಸಹ ಸಂಸ್ಥಾಪಕರಾಗಿರುವ ಪ್ರಿಯದರ್ಶಿ ಪಾಂಡಾ, ಶಶಿ ಕುಪ್ಪಣ್ಣಗಾರಿ ಮುಂತಾದವರು ಈ ವಿಚಾರ ವಿನಿಮಯದಲ್ಲಿ ವರ್ಚುಯಲ್‌ ರೂಪದಲ್ಲಿ ಪಾಲ್ಗೊಂಡಿದ್ದರು. ಜತೆಗೆ ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್‌ ಕೃಷ್ಣ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

You may have missed