ಟೆಸ್ಟ್ ಸರಣಿಗಾಗಿ ಭಾರತ ಆಟಗಾರರ ಭರ್ಜರಿ ಅಭ್ಯಾಸ

0

ಫೆಬ್ರವರಿ 9 ರಿಂದ ಶುರುವಾಗಲಿರುವ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸಜ್ಜಾಗುತ್ತಿದೆ. ಈಗಾಗಲೇ ಕಾಂಗರೂ ಪಡೆ ಬೆಂಗಳೂರಿನ ಆಲೂರಿನಲ್ಲಿರುವ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದೆ.

 

ಇದೀಗ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಟೀಮ್ ಇಂಡಿಯಾದ ಕೆಲ ಆಟಗಾರರು ಮೊದಲ ಟೆಸ್ಟ್ಗಾಗಿ ನಾಗ್ಪುರಕ್ಕೆ ತಲುಪಿದ್ದಾರೆ. ತಲುಪಿದ ದಿನವೇ ಆಟಗಾರರು ಜಿಮ್ನಲ್ಲಿ ಮತ್ತು ಮೈದಾನದಲ್ಲಿ ಪ್ರ್ಯಾಕ್ಟೀಸ್ ಕೂಡ ಶುರು ಮಾಡಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ನೆಟ್‌ನಲ್ಲಿ ಅಭ್ಯಾಸ ನಡೆಸುವುದು ಕಂಡುಬಂದಿದೆ. ಸುಮಾರು ಐದು ತಿಂಗಳುಗಳ ಕಾಲ ಕ್ರಿಕೆಟ್ನಿಂದ ದೂರ ಉಳಿದಿದ್ದ ಜಡೇಜಾ ತಂಡಕ್ಕೆ ಕಮ್ಬ್ಯಾಕ್ ಮಾಡಿರುವುದು ಬಲ ಹೆಚ್ಚಿಸಿದೆ.

ಭಾರತದ ಸ್ಕ್ವಾಡ್‌ಗೆ ನಾಲ್ವರು ಸ್ಪಿನ್ನರ್‌ಗಳನ್ನು ನೆಟ್ ಬೌಲರ್‌ಗಳಾಗಿ ಸೇರ್ಪಡೆಗೊಳಿಸಲಾಗಿದ್ದು ಅದರಲ್ಲಿ ಭಾರತದ ವೈಟ್‌ಬಾಲ್ ಸ್ಪೆಶಲಿಸ್ಟ್ ವಾಶಿಂಗ್ಟನ್ ಸುಂದರ್ ಕೂಡ ಸೇರಿಕೊಂಡಿದ್ದಾರೆ. ಇವರ ಜೊತೆಗೆ ಎಡಗೈ ಸ್ಪಿನ್ನರ್ ಸೌರಭ್ ಕುಮಾರ್, ರಿಸ್ಟ್ ಸ್ಪಿನ್ನರ್ ರಾಹುಲ್ ಚಹರ್ ಹಾಗೂ ಮತ್ತೋರ್ವ ಎಡಗೈ ಸ್ಪಿನ್ನರ್ ಆರ್ ಸಾಯಿ ಕಿಶೋರ್ ಇದ್ದಾರೆ.

ಇತ್ತ ಆಸ್ಟ್ರೇಲಿಯಾ ತಂಡ ನೆಟ್ಸ್‌ನಲ್ಲಿ ಬೌಲಿಂಗ್ ಮಾಡಲು ಜಮ್ಮು ಕಾಶ್ಮೀರದ ಮಿಸ್ಟರಿ ಸ್ಪಿನ್ನರ್ ಅಬಿದ್ ಮುಷ್ತಾಕ್‌ರನ್ನು ಆಹ್ವಾನಿಸಿದೆ. ಟೀಮ್ ಇಂಡಿಯಾ ಸ್ಪಿನ್ನರ್ಗಳ ವಿರುದ್ಧ ಆಡಲು ಆಸ್ಟ್ರೇಲಿಯಾ ಹೂಡಿರುವ ರಹಸ್ಯ ಉಪಾಯ ಇದಾಗಿದೆ.

ಫೆಬ್ರವರಿ 9 ರಿಂದ ಟೆಸ್ಟ್ ಸರಣಿ ಶುರುವಾಗಲಿದೆ. ಇದು ಒಟ್ಟು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಾಗಿದೆ. ಇದಾದ ಬಳಿಕ ಮಾರ್ಚ್ 17 ರಿಂದ ಏಕದಿನ ಸರಣಿ ನಡೆಯಲಿದೆ. ಟೆಸ್ಟ್ ಪಂದ್ಯಗಳು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದಾಗಿದ್ದು, ಇದರಲ್ಲಿ ಸರಣಿ ಜಯಿಸುವ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರಬಹುದು.

ಬ್ಯಾಟಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ರವೀಂದ್ರ ಜಡೇಜಾ.

ಮೊದಲೆರಡು ಟೆಸ್ಟ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.

ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

About Author

Leave a Reply

Your email address will not be published. Required fields are marked *

You may have missed