ಜ. 19ರಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಭೇಟಿ

0

ಲಬುರಗಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮತ್ತೆ ರಾಜ್ಯದಲ್ಲಿ ಕಮಲ ಅರಳಿಸುವುದಕ್ಕೆ ನಾನಾ ಕಸರತ್ತು ಮಾಡುತ್ತಿದ್ದು, ಸದ್ಯ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ಜನವರಿ 19ರಂದು ಮತ್ತೆ ಕಲಬುರಗಿ, ಯಾದಗಿರಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜನವರಿ 19ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರೋ ಕಂದಾಯ ಗ್ರಾಮದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ.

ಇನ್ನು ಕಲಬುರಗಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಕಲಬುರಗಿ ಡಿಸಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಕಂದಾಯ ಸಚಿವ ಆರ್​.ಅಶೋಕ್ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3.30ಕ್ಕೆ ಮಳಖೇಡ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.

About Author

Leave a Reply

Your email address will not be published. Required fields are marked *

You may have missed