ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗ್ತಿದೆ ಜಾರಕಿಹೊಳಿ ಹೇಳಿಕೆ.!

0

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ಕೊಟ್ಟ ಹಣದ ಆಮಿಷದ ಹೇಳಿಕೆ‌ ರಾಜಕೀಯ ವಾಕ್ಸಮರಕ್ಕೆ ಕಾರಣವಾಗ್ತಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರು ದೂರು ದಾಖಲಿಸಿ ತನಿಖೆಗೆ ಆಗ್ರಹಿಸಿದ್ದಾರೆ. ಕೈ ಪಾಳಯದ ದೂರಿಗೆ ಸಿಎಂ ಬೊಮ್ಮಾಯಿ ಟಾಂಗ್ ಕೊಟ್ಟಿದ್ದು , ಸಚಿವ ಸುಧಾಕರ್ ಮಾಡಿದ ಆರೋಪಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ದಾಖಲೆ ಸಮೇತ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ ಈ ಮಧ್ಯೆ ಅಲಿ ಬಾಬಾ ಗ್ಯಾಂಗ್ ಟಾಕ್ ವಾರ್ ಜೋರಾಗ್ತಿದೆ..‌.

ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರ್ತಿದೆ 3 ಪಕ್ಷಗಳಲ್ಲಿ ಪ್ರಣಾಳಿಕೆ, ಉಚಿತ ಭಾಗ್ಯಗಳ ಘೋಷಣೆಗಳು ಜೋರಾಗ್ತಿವೆ.

ಇತ್ತೀಚೆಗೆ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತದಾರ ಆರು ಸಾವಿರ ಹಣ ನೀಡುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಿಂದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ನಿಯೋಗ ಸಿಎಂ ಬೊಮ್ಮಾಯಿ, ಜೆಪಿ ನಡ್ಡಾ,ಕಟೀಲ್, ರಮೇಶ್ ವಿರುದ್ಧ ದೂರು‌ ದಾಖಲಿಸಿದ್ದಾರೆ.ದೂರಿನಲ್ಲಿ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರು ನೀಡಿ ತನಿಖೆಗೆ ಆಗ್ರಹಿಸಿದ್ದಾರೆ..

About Author

Leave a Reply

Your email address will not be published. Required fields are marked *

You may have missed