ಜೆಡಿಎಸ್ ನಾಯಕ ಎಚ್ ಡಿ ದೇವೇಗೌಡರಿಗೆ ಭಾರತ್ ಜೋಡೋ ಸಮಾರೋಪಕ್ಕೆ ಆಹ್ವಾನ

0

ಬೆಂಗಳೂರು: ಕಾಂಗ್ರೆಸ್ ನಾಯಕ, ಸಂಸದ ರಾಹುಲ್​ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ಯಾತ್ರೆ ಕಾಶ್ಮೀರ ತಲುಪಿದೆ. ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ, ಜೆಡಿಎಸ್​ ನಾಯಕ ಹೆಚ್​ ಡಿ ದೇವೇಗೌಡ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನಿಸಿದ್ದಾರೆ.

ಆದರೆ ಹೆಚ್. ಡಿ ದೇವೇಗೌಡರು ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ.

ಈ ಸಂಬಂಧ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ದೇವೇಗೌಡ, ನಾನು ಈ ಕಾರ್ಯಕ್ರಮಕ್ಕೆ ಹಾಜರಾಗಲು ಆಗುತ್ತಿಲ್ಲ. ರಾಹುಲ್ ಗಾಂಧಿ ಅವರಿಗೆ ಶುಭಾಷಯ ಕೋರುತ್ತೇನೆ. ದೇಶದ ಒಗ್ಗೂಡಿವಿಕೆಗೆ ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮರಾದ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ಅತ್ಯಂತ ಸೂಕ್ತವಾಗಿದೆ. 3,500 ಕಿಲೋ‌ಮೀಟರ್ ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದಾರೆ. ನನ್ನ ಶುಭಾಶಯಗಳನ್ನು ರಾಹುಲ್ ಗಾಂಧಿ ಅವರಿಗೆ ತಿಳಿಸಿ ಎಂದು ಪತ್ರದ ಮೂಲಕ ಅಭಿನಂದನೆ ತಿಳಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed