ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಲಕ್ಷ್ಮೀ ಹೆಬ್ಬಾಳಕರ್‌

0

ಬೆಳಗಾವಿ: ರಾಜಹಂಸಗಡದ ಮೇಲೆ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿಚಾರ ಕಳೆದ ಕೆಲ ತಿಂಗಳುಗಳಿಂದ ಜಿಲ್ಲೆಯಾದ್ಯಂತ ಚರ್ಚೆಯಲ್ಲಿತ್ತು. ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿಷಯ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ್‌ ನಡುವೆ ಪ್ರತಿಷ್ಠೆಯ ಕದನವಾಗುವ ಲಕ್ಷಣಗಳು ಆರಂಭದಿಂದಲೇ ಕಂಡುಬಂದಿತ್ತು.

ಇತ್ತೀಚೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಕೀಯ ಕಣದಲ್ಲಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಕಾಣಿಸಿಕೊಳ್ಳತೊಡಗಿದ ಬಳಿಕ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಪೈಪೋಟಿ ನಡೆಯುವುದು ಜನರಿಗೆ ನಿಚ್ಚಳವಾಗಿತ್ತು.

ಕೊನೆಗೂ ನಿರೀಕ್ಷೆಯಂತೆಯೇ ಪೈಪೋಟಿ ತೀವ್ರಗೊಂಡು ಶಿವಾಜಿ ಮೂರ್ತಿಯ ಅನಾವರಣ ಕಾರ್ಯಕ್ರಮ ಎರಡು ಬಾರಿ ನಡೆಯುವಂತಾಗಿದೆ. ಮಾರ್ಚ್ 2 ರಂದು ಸರಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂರ್ತಿ ಅನಾವರಣಗೊಳಿಸಿದ್ದರೆ, ಹಠ ಬಿಡದ ಲಕ್ಷ್ಮೀ ಹೆಬ್ಬಾಳ್ಕರ್ ಭಾನುವಾರ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಶಾಸ್ತ್ರೋಸ್ತ್ರವಾಗಿ ಪೂಜೆ ಸಹಿತ ಶಿವಾಜಿ ಮೂರ್ತಿಯನ್ನು ಅನಾವರಣಗೊಳಿಸಿದ್ದಾರೆ.
ಸೆಡ್ಡುಹೊಡೆದಲಕ್ಷ್ಮೀಹೆಬ್ಬಾಳ್ಕರ್:
ಮೊದಲು ರಾಜಹಂಸಗಡದಲ್ಲಿ ಪ್ರತಿಷ್ಠಾಪನೆಗೊಂಡಿರುವ ಶಿವಾಜಿ ಮೂರ್ತಿ ಅನಾವರಣ ಕಾರ್ಯಕ್ರಮವನ್ನು ಮಾರ್ಚ್ 5ರಂದು ನಡೆಸಲು ಲಕ್ಷ್ಮೀ ಹೆಬ್ಬಾಳ್ಕರ್ ತೀರ್ಮಾನಿಸಿದ್ದರು. ಆದರೆ, ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಮುಖಂಡರನ್ನೂ ಕರೆಸಲು ಮುಂದಾಗಿದ್ದ ಬಗ್ಗೆ ರಮೇಶ ಜಾರಕಿಹೊಳಿ ಆಕ್ಷೇಪವೆತ್ತಿದ್ದರು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ಮೂರು ದಿನ ಮುಂಚಿತವಾಗಿಯೇ ಮೂರ್ತಿ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಿಷ್ಟಾಚಾರದ ಪ್ರಕಾರ ಅಂದಿನ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಧ್ಯಕ್ಷತೆ ನೀಡಲಾಗಿತ್ತು. ಆದರೆ, ತಾವು ನಿಗದಿಪಡಿಸಿದ ದಿನ ಮತ್ತು ತಾವಂದುಕೊಂಡ ಮಾದರಿಯಲ್ಲಿ ಕಾರ್ಯಕ್ರಮ ಆಯೋಜನೆಯಾಗದ ಕಾರಣ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸರಕಾರದ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಸೆಡ್ಡು ಹೊಡೆದಿದ್ದರು.

ಭಾನುವಾರ ತಮ್ಮ ಯೋಜನೆಯಂತೆಯೇ ಶಿವಾಜಿ ಮಹಾರಾಜರ ವಂಶಸ್ಥರಾದ ಯುವರಾಜ ಸಂಭಾಜಿ ರಾಜೆ ಛತ್ರಪತಿ ಅವರಿಂದ ಶಿವಾಜಿ ಮೂರ್ತಿ ಅನಾವರಣಗೊಳಿಸಿ ರಾಜ್ಯ ಬಿಜೆಪಿ ಸರಕಾರಕ್ಕೆ ತಿರುಗೇಟು ನೀಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed