ಅಕ್ಕಿ ವಿಚಾರದಲ್ಲಿ ಕೇಂದ್ರ ಕೀಳುಮಟ್ಟದ ರಾಜಕಾರಣ ಪ್ರದರ್ಶಿಸಿದೆ – ಸಿದ್ದರಾಮಯ್ಯ

0

ವದೆಹಲಿ:-ರಾಷ್ಟ್ರಪತಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಗಿದೆ. ಇಂದು ಸಂಜೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಿದ್ದು, ಪ್ರಾಸಂಗಿಕವಾಗಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡುವ ಉದ್ದೇಶವಿದೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ಪ್ರಸ್ತಾಪ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್ ಸಿ ಐ ಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್ ಸಿ ಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರಮುಖೇನ ತಿಳಿಸಿದ್ದರು. ಎಫ್ ಸಿಐ ನ ಡೆಪ್ಯೂಟಿ ಮ್ಯಾನೇಜರ್ ನ್ನು ಭೇಟಿಯಾಗಿ ಈ ಬಗ್ಗೆ ಖಚಿತಪಡಿಸಿಕೊಳ್ಳಲಾಗಿತ್ತು. ಆದರೆ ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ ಸಿ ಐ ಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದ್ದು, ನಂತರ ಜೂನ್ 14 ರಂದು ಎಫ್ ಸಿ ಐ ನ ಅಧ್ಯಕ್ಷರು ಪತ್ರ ಬರೆದು , ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

About Author

Leave a Reply

Your email address will not be published. Required fields are marked *

You may have missed