ಮಹದಾಯಿ ನದಿ ನೀರು ವಿವಾದ ಕುರಿತು ಶೀಘ್ರದಲ್ಲೇ ಪರಿಹಾರ: ಸಚಿವ ಗಜೇಂದ್ರ ಸಿಂಗ್

0

ಣಜಿ : ಕರ್ನಾಟಕ ಹಾಗೂ ಗೋವಾ ನಡುವೆ ಸಂಘರ್ಷಕ್ಕೆ ಕಾರಣವಾಗಿರುವ ಮಹದಾಯಿ ನದಿ ನೀರು ವಿವಾದ ಕುರಿತು ಶೀಘ್ರದಲ್ಲೇ ಪರಿಹಾರ ಕಂಡುಹಿಡಿಯಲಾಗುವುದು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರು ಭರವಸೆ ನೀಡಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ನೇತೃತ್ವದ ನಿಯೋಗ ತಮ್ಮನ್ನು ಭೇಟಿ ಮಾಡಿದ ಬಳಿಕ ಈ ಸಂಬಂಧ ಅವರು ಟ್ವೀಟ್‌ ಮಾಡಿದ್ದಾರೆ. ದೆಹಲಿಯ ನನ್ನ ನಿವಾಸದಲ್ಲಿ ಗೋವಾ ಸಿಎಂ ನೇತೃತ್ವದ ನಿಯೋಗ ಭೇಟಿ ಮಾಡಿತು. ಮಹದಾಯಿ ನದಿ ನೀರು ಹಂಚಿಕೆ ಕುರಿತು ಸಮಾಲೋಚನೆ ನಡೆಸಿತು. ಇದಕ್ಕೆ ಶೀಘ್ರದಲ್ಲೇ ಪರಿಹಾರ ರೂಪಿಸಲಾಗುವುದು ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಹದಾಯಿ ನದಿಯ ಉಪನದಿ(ನಾಲೆ)ಗಳಾದ ಕಳಸಾ ಹಾಗೂ ಬಂಡೂರಿಗೆ ಅಣೆಕಟ್ಟೆಗಳನ್ನು ನಿರ್ಮಿಸಿ ನೀರು ಬಳಸಿಕೊಳ್ಳಲು ಕರ್ನಾಟಕ ಯೋಜನೆ ರೂಪಿಸಿರುವುದು ಗೋವಾ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಗೋವಾ ಸಿಎಂ ನೇತೃತ್ವದ ನಿಯೋಗ ಬುಧವಾರವಷ್ಟೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಈ ಕುರಿತು ದೂರು ಸಲ್ಲಿಸಿತ್ತು. ಕರ್ನಾಟಕದ ಡಿಪಿಆರ್‌ಗೆ ನೀಡಿರುವ ಅನುಮತಿಯನ್ನು ಹಿಂಪಡೆಯಬೇಕು. ಮಹದಾಯಿ ಜಲ ನಿರ್ವಹಣಾ ಪ್ರಾಧಿಕಾರವನ್ನು ಕೂಡಲೇ ಸ್ಥಾಪಿಸಬೇಕು ಎಂದು ಒತ್ತಾಯಿಸಿತ್ತು.

About Author

Leave a Reply

Your email address will not be published. Required fields are marked *

You may have missed