ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಿಂದ ಸಭೆ: ಸಮಸ್ಯೆಗಳ ಇತ್ಯರ್ಥ ಪಡಿಸಲು ಸೂಕ್ತ ಕ್ರಮ

0

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳ ಪ್ರಮುಖ ಸಮಸ್ಯೆಗಳ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವರ ಜೊತೆ ಚರ್ಚಿಸಿ ಇತ್ಯರ್ಥ ಪಡಿಸಲು ಸೂಕ್ತ ಕ್ರಮವಹಿಸಲಾಗುವುದು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು ಶ್ರೀ ವೆಂಕಟೇಶನ್ ರವರು ತಿಳಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಸಂಬಂಧಿಸಿದಂತೆ ಇಂದು ಹೊಸ ಕುಮಾರ ಕೃಪಾ ಅತಿಥಿಗೃಹ ಸಭಾ ಕೊಠಡಿ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪೌರಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ, ಆಟೋ ಟಿಪ್ಪರ್ ಗಳ ಚಾಲಕ ಮತ್ತು ಕ್ಲೀನರ್ ಗಳನ್ನು ನೇರ ವೇತನ ಪಾವತಿ ವ್ಯಾಪ್ತಿಗೆ ಸೇರಿಸುವ ಹಾಗೂ ಇನ್ನಿತರೆ ಕೆಲ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿ ಅದನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ರವರ ಜೊತೆ ಚರ್ಚಿಸಿ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದು ತಿಳಿಸಿದರು.

ಸಫಾಯಿ ಕರ್ಮಚಾರಿಗಳ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸುವುದು ನಮ್ಮ ಗುರಿಯಾಗಿದೆ. ನಿಮ್ಮ ಸಮಸ್ಯೆಗಳ ಬಗ್ಗೆ ಮನವಿ ಪತ್ರಗಳನ್ನು ಕೊಡಿ. ಸ್ಥಳೀಯ ಮಟ್ಟದಲ್ಲಿ ಇತ್ಯರ್ಥವಾಗದ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಇತ್ಯರ್ಥಪಡಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು. ಮುಖ್ಯ ಆಯುಕ್ತರು ತುಷಾರ್ ಗಿರಿನಾಥ್ ರವರು ಸಭೆಯಲ್ಲಿ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರು ಎಲ್ಲಾ ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಮಸ್ಟರಿಂಗ್ ಸೆಂಟರ್ ಗಳ ಬಳಿ ವಿಶ್ರಾಂತಿ ಪಡೆಯುವ ಸಲುವಾಗಿ ಸುವಿಧಾ ಕ್ಯಾಬಿನ್ ಗಳ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಸ್ಟರಿಂಗ್ ಸೆಂಟರ್ ಗಳ ಬಳಿ ಪೌರಕಾರ್ಮಿಕರ ವಿಶ್ರಾಂತಿಗಾಗಿ ಶಾಶ್ವತ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಕಸ ಗುಡಿಸುವ ಪೌರಕಾರ್ಮಿಕರಿಗಾಗಿ ಕೈಯಿಂದ ತಳ್ಳುವ ಸ್ವೀಪಿಂಗ್ ಯಂತ್ರಗಳ(Hand push operated sweeping machines) ವ್ಯವಸ್ಥೆ ಮಾಡಲಾಗುತ್ತಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶೀಘ್ರ ಸ್ವೀಪಿಂಗ್ ಯಂತ್ರಗಳ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ ಎಲ್ಲರಿಗೂ ಸಮವಸ್ತç ವಿತರಣೆ, ಪಿ.ಎಫ್ ಹಾಗೂ ಇ.ಎಸ್.ಐ ವ್ಯವಸ್ಥೆ ಇದೆ ಎಂದು ತಿಳಿಸಿದರು.

ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್ ರವರು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ 243 ವಾರ್ಡ್ ಗಳು ಬರಲಿದ್ದು, 1705 ಖಾಯಂ ಹಾಗೂ 15383 ನೇರ ವೇತನ ಸೇರಿದಂತೆ ಒಟ್ಟಾರೆ 17088 ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. 2018 ರಿಂದ ಡಿಪಿಎಸ್(ಡೈರೆಕ್ಟ್ ಪೇಮೆಂಟ್ ಸಿಸ್ಟಮ್) ವ್ಯವಸ್ಥೆ ಜಾರಿಯಾಗಿದೆ. 3 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಎಂದು ತಿಳಿಸಿದರು.

ಪೌರಕಾರ್ಮಿಕರಿಗೆ ಕ್ವಾಟ್ರಸ್ ನಿರ್ಮಾಣ ಮಾಡಲು ಸ್ಥಳಾವಕಾಶವಿದ್ದು, ಬಹುಮಹಡಿ ಕಟ್ಟಡವನ್ನು ನಿರ್ಮಾಣ ಮಾಡಿ, ಪೌರಕಾರ್ಮಿಕರಿಗೆ ಮನೆಗಳನ್ನು ನೀಲಾಗುವುದು. ಬಿಡಿಎ ಕ್ವಾಟ್ರಸ್ ನಲ್ಲಿ ಪೌರಕಾರ್ಮಿಕರಿಗಾಗಿ ಮೀಸಲಿಟ್ಟಿರುವ ಮನೆಗಳನ್ನು ಹಂಚಿಕೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

About Author

Leave a Reply

Your email address will not be published. Required fields are marked *

You may have missed