ಬೆಂಗಳೂರಿನಲ್ಲಿ ಇಂದು ಮಳೆಯ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

0

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,

ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರಿನ ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

About Author

Leave a Reply

Your email address will not be published. Required fields are marked *

You may have missed