ಸಿಡ್ನಿಯ ನಾರಾಯಣಸ್ವಾಮಿ ದೇವಸ್ಥಾನ ಧ್ವಂಸಗೊಳಿಸಿದ ಖಲಿಸ್ತಾನಿಗಳು

0

ವಿದೇಶಗಳಲ್ಲಿ ಹಿಂದೂ ದೇವಾಲಯಗಳ ಮೇಲಿನ ಖಲಿಸ್ತಾನಿಗಳ ದಾಳಿ ಮುಂದುವರೆದಿದೆ. ಸದ್ಯ ಖಲಿಸ್ತಾನಿಗಳು ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನದ ಮೇಲೆ ದಾಳಿ ನಡೆಸಿದ್ದಾರೆ.

ದೇವಸ್ಥಾನದ ಗೋಡೆ ಮೇಲೆ ಕಪ್ಪು ಬಣ್ಣ ಬಳಿದು ದೇವಸ್ಥಾನವನ್ನು ಧ್ವಂಸಗೊಳಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಕಳೆದ ಎರಡು ತಿಂಗಳ ಖಾಲಿಸ್ತಾನಿಗಳ ಚಟುವಟಿಕೆಗಳು ಸ್ವಲ್ಪ ಶಾಂತವಾದಂತೆ ಕಂಡಿತ್ತು, ಆದರೆ ಇದೀಗ ಪರಿಸ್ಥಿತಿ ಮತ್ತೆ ಹದಗೆಟ್ಟಿದೆ.

ಬ್ರಿಸ್ಬೇನ್​​ ನಗರದಲ್ಲಿ ಶ್ರೀಲಕ್ಷ್ಮೀ ನಾರಾಯಣ ದೇಗುಲದ ಮೇಲೆ ದಾಳಿ ನಡೆದಿದೆ, ದೇಗುಲದ ಮೇಲೆ ದಾಳಿ ನಡೆಸಿದ ಖಲಿಸ್ತಾನ್ ಸಂಘಟನೆ ಬೆಂಬಲಿಗರು, ದೇಗುಲವನ್ನು ಧ್ವಂಸಗೊಳಿಸಿದ್ದಾರೆ. ಎರಡು ತಿಂಗಳಲ್ಲಿ ಆಸ್ಟ್ರೇಲಿಯದ ದೇವಸ್ಥಾನದಲ್ಲಿ ನಡೆದ ನಾಲ್ಕನೇ ಘಟನೆ ಇದಾಗಿತ್ತು. ಬೆಳಗ್ಗೆ ಭಕ್ತರು ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಬಂದ ವೇಳೇ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.

ಬ್ರಿಸ್ಬೇನ್‌ನ ದಕ್ಷಿಣ ಭಾಗದಲ್ಲಿರುವ ಬರ್ಬ್ಯಾಂಕ್ ಉಪನಗರದಲ್ಲಿರುವ ಬ್ರಿಸ್ಬೇನ್‌ನಲ್ಲಿರುವ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯವನ್ನು ಖಲಿಸ್ತಾನಿ ಬೆಂಬಲಿಗರು ಧ್ವಂಸಗೊಳಿಸಿದ್ದಾರೆ ಎಂದು ಆಸ್ಟ್ರೇಲಿಯ ಟುಡೇ ವರದಿ ಮಾಡಿತ್ತು.

ದೇವಸ್ಥಾನದ ಅರ್ಚಕರು ಮತ್ತು ಭಕ್ತರು ಇಂದು ಬೆಳಗ್ಗೆ ಕರೆ ಮಾಡಿ ನಮ್ಮ ದೇವಾಲಯದ ಮೇಲೆ ನಡೆದಿರುವ ವಿಧ್ವಂಸಕ ಕೃತ್ಯಗಳ ಬಗ್ಗೆ ನನಗೆ ಮಾಹಿತಿ ನೀಡಿದರು ಎಂದು ದೇವಾಲಯದ ಅಧ್ಯಕ್ಷ ಸತೀಂದರ್ ಶುಕ್ಲಾ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed