ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು ಬ್ಯಾಟಿಂಗ್ ಆಯ್ಕೆ

0

ಇಂದೊರ್: ಭಾರತ ಹಾಗೂ ನ್ಯೂಜಿಲೆಂಡ್‌ ನಡುವಿನ ಮೂರು ಪಂದ್ಯಗಳ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್‌ ತಂಡವು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ, ಇದೀಗ ಕ್ಲೀನ್‌ ಸ್ವೀಪ್‌ ಮಾಡುವ ವಿಶ್ವಾಸದಲ್ಲಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಕೊನೆಯ ಪಂದ್ಯಕ್ಕೆ ಇಲ್ಲಿನ ಹೋಳ್ಕರ್ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಶಿಪ್ಲೆ ಬದಲಿಗೆ ಜೇಕಬ್ ಡಫ್ಫಿ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡಲಾಗಿದ್ದು, ಮಾರಕ ವೇಗಿ ಉಮ್ರಾನ್ ಮಲಿಕ್ ಹಾಗೂ ಲೆಗ್‌ಸ್ಪಿನ್ನರ್ ಯುಜುವೇಂದ್ರ ಚಹಲ್ ತಂಡ ಕೂಡಿಕೊಂಡಿದ್ದಾರೆ.

ಟೀಂ ಇಂಡಿಯಾಗೆ ನಂ.1 ಸ್ಥಾನಕ್ಕೇರುವ ಗುರಿ: ಭಾರತ ತಂಡವು ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ, ಇದೀಗ ಮೂರನೇ ಪಂದ್ಯವನ್ನು ಗೆದ್ದು ಸರಣಿ ಕ್ಲೀನ್‌ಸ್ವೀಪ್ ಮಾಡುವುದರ ಜತೆಗೆ ಏಕದಿನ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರುವ ವಿಶ್ವಾಸದಲ್ಲಿದೆ.

ಮತ್ತೊಂದಡೆ ನ್ಯೂಜಿಲೆಂಡ್‌ ವೈಟ್‌ವಾಶ್‌ ತಪ್ಪಿಸಿಕೊಳ್ಳಲು ಎದುರು ನೋಡುತ್ತಿದೆ. ವಿಲಿಯಮ್ಸನ್‌ ಅನುಪಸ್ಥಿತಿಯಲ್ಲಿ ತಂಡದ ಬ್ಯಾಟಿಂಗ್‌ ಪಡೆ ದುರ್ಬಲವಾಗಿ ತೋರುತ್ತಿದೆ. ಅಗ್ರ 6 ಬ್ಯಾಟರ್‌ಗಳು ಕಳೆದ 30 ಇನ್ನಿಂಗ್ಸ್‌ಗಳಲ್ಲಿ ಕೇವಲ 7 ಬಾರಿಯಷ್ಟೇ 40 ರನ್‌ ದಾಟಿದ್ದಾರೆ. ಮೈಕಲ್‌ ಬ್ರೇಸ್‌ವೆಲ್‌ ಮಾತ್ರ ಗಮನಾರ್ಹ ಪ್ರದರ್ಶನ ತೋರಿದ್ದಾರೆ.

ಭಾರತ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್‌, ವಿರಾಟ್ ಕೊಹ್ಲಿ, ಇಶಾನ್‌ ಕಿಶನ್‌ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್‌ ಪಾಂಡ್ಯ, ವಾಷಿಂಗ್ಟನ್‌ ಸುಂದರ್, ಶಾರ್ದೂಲ್‌ ಠಾಕೂರ್, ಕುಲ್ದೀಪ್‌ ಯಾದವ್, ಯುಜುವೇಂದ್ರ ಚಹಲ್‌, ಉಮ್ರಾನ್‌ ಮಲಿಕ್‌.

ನ್ಯೂಜಿಲೆಂಡ್‌: ಫಿನ್‌ ಆಯಲೆನ್‌, ಡೆವೊನ್‌ ಕಾನ್‌ವೇ, ಹೆನ್ರಿ ನಿಕೋಲ್ಸ್‌, ಡೇರಲ್‌ ಮಿಚೆಲ್‌, ಟಾಮ್ ಲೇಥಮ್‌(ನಾಯಕ), ಗ್ಲೆನ್ ಫಿಲಿಫ್ಸ್‌, ಮಿಚೆಲ್ ಬ್ರೇಸ್‌ವೆಲ್‌, ಮಿಚೆಲ್ ಸ್ಯಾಂಟ್ನರ್‌, ಜೇಕಬ್ ಡಫ್ಪಿ , ಬ್ಲೈರ್ ಟಿಕ್ನೆರ್‌, ಫಗ್ರ್ಯೂಸನ್‌.

About Author

Leave a Reply

Your email address will not be published. Required fields are marked *

You may have missed