ಉಗ್ರ ಕೃತ್ಯಕ್ಕೆ ಬಳಸುತ್ತಿದ್ದ ಕಮ್ಯುನಿಟಿ ಹಾಲ್ ನ ಸುಪರ್ದಿಗೆ ಪಡೆದ NIA

0

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಕಮ್ಯುನಿಟಿ ಹಾಲ್ ಅನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

ಇಡುಕ್ಕಿ ಗ್ರಾಮದಲ್ಲಿರುವ ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಉಗ್ರ ಕೃತ್ಯಕ್ಕೆ ಬಳಸಲಾಗುತ್ತಿತ್ತು ಎಂಬ ಆರೋಪವಿದೆ. ಹೀಗಾಗಿ ವಶಕ್ಕೆ ತೆಗೆದುಕೊಂಡಿರುವುದಾಗಿ ಎನ್‌ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕಮ್ಯುನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್‌ಐಎ ಸಂಪೂರ್ಣ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಈ ವಿಚಾರವಾಗಿ ಆದೇಶದ ಪ್ರತಿಯನ್ನು ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೆ ಕಳುಹಿಸಲಾಗಿದೆ ಎಂದು ಎನ್‌ಐಎ ಅಧಿಕೃತ ಮೂಲಗಳು ತಿಳಿಸಿವೆ.

ಎನ್‌ಐಎ ವಶದಲ್ಲಿರುವ ಜಾಗವನ್ನು ಪರಭಾರೆ ಮಾಡುವಂತಿಲ್ಲ. ಬಾಡಿಗೆ, ಭೋಗ್ಯಕ್ಕೆ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ವಸ್ತುಗಳನ್ನು ಸಾಗಿಸುವುದು ಅಥವಾ ನವೀಕರಿಸುವುದನ್ನು ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಅನೇಕ ಆರೋಪಿಗಳನ್ನು ಬಂಧಿಸಲಾಗಿದೆ. ಈ ಮಧ್ಯೆ, ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಎಸ್ಡಿಪಿಐ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದ್ದು ಇತ್ತೀಚೆಗೆ ಚರ್ಚೆಗೆ ಗ್ರಾಸವಾಗಿತ್ತು

About Author

Leave a Reply

Your email address will not be published. Required fields are marked *

You may have missed