ವಸತಿ ಸಚಿವ ವಿ ಸೋಮಣ್ಣ ರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

0

ಬೆಂಗಳೂರು: ವಸತಿ ಸಚಿವ ವಿ ಸೋಮಣ್ಣ ರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು, ಸಚಿವ ಸೋಮಣ್ಣ ಅಸಮಾಧಾನ ವಿಚಾರ ಕುರಿತು ದೆಹಲಿಯಲ್ಲಿ ಹೈಕಮಾಂಡ್​ ಅವರನ್ನು ಕರೆಸಿ ಮಾತನಾಡಿದ್ದಾರೆ.

ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ. ನಾವು ಅವರನ್ನು ಭೇಟಿಯಾಗಿಯೇ ಮೂರು ತಿಂಗಳು ಆಗಿದೆ. ಆದರೆ ಯಾರನ್ನೂ ಕಡೆಗಣಿಸಿಲ್ಲ ಎಂದು ಹೇಳಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ಕೆಲಸ ಮಾಡುತ್ತಿದ್ದಾರೆ

. ಸೋಮಣ್ಣ ಕೂಡ ಕೆಲಸ ಮಾಡುತ್ತಿದ್ದಾರೆ. ಟಿಕೆಟ್ ವಿಚಾರದಲ್ಲಿ ಎಲ್ಲವೂ ಚರ್ಚೆ ಆಗುತ್ತದೆ. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು. ಸೋಮಣ್ಣ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಇಲ್ಲಿ ಯಾರು ಯಾರನ್ನೂ ಕಡೆಗಣಿಸುವ ಪ್ರಶ್ನೆ ಇಲ್ಲ. ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಬೇಕು. ಬೇರೆ ವಿಚಾರಕ್ಕೆ ನಾನು ತಲೆಕೆಡಿಸಿಕೊಂಡಿಲ್ಲ. ಗೆಲ್ಲುವಂತ ಅವಕಾಶ ಜಾಸ್ತಿ ಇರುವುದರಿಂದ ಅಭ್ಯರ್ಥಿಗಳ ಸಂಖ್ಯೆ ಜಾಸ್ತಿ ಇದೆ. ಹೀಗಾಗಿ ಟಿಕೆಟ್ ಬಗ್ಗೆ ಚರ್ಚೆ ಆಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸ್ಪಷ್ಟೀಕರಣ ನೀಡಿದರು.

About Author

Leave a Reply

Your email address will not be published. Required fields are marked *

You may have missed