ಚಂದ್ರಯಾನ -3 ಮಿಷನ್ ಗೆ ಪ್ರಧಾನಿ ಮೋದಿ ಶುಭಹಾರೈಕೆ

0

ದೆಹಲಿ: ಚಂದ್ರನ ಮೇಲೆ ಗಗನನೌಕೆ ಇಳಿಸಿ ಅಧ್ಯಯನ ಮಾಡುವ ಉದ್ದೇಶದ ಚಂದ್ರಯಾನ-3 ಕಾರ್ಯಕ್ರಮಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ಚಂದ್ರಯಾನ-3 ಉಡಾವಣೆ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಭಹಾರೈಸಿದ್ದಾರೆ.

ಚಂದ್ರಯಾನ-3 ಕುರಿತು ಟ್ವೀಟ್‌ ಮಾಡಿರುವ ಮೋದಿ, ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2023 ರ ಜುಲೈ 14 ಯಾವಾಗಲೂ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಿದೆ.

ಚಂದ್ರಯಾನ-3 ನಮ್ಮ ಮೂರನೇ ಚಂದ್ರಯಾನ. ಅದರ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಈ ಗಮನಾರ್ಹ ಮಿಷನ್ ನಮ್ಮ ರಾಷ್ಟ್ರದ ಭರವಸೆ ಮತ್ತು ಕನಸುಗಳನ್ನು ಹೊತ್ತೊಯ್ಯುತ್ತದೆ ಎಂದು ಬರೆದುಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed