ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದೆ: ಮನೋಜ್ ಕುಮಾರ್ ಮೀನಾ

0

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್​ ಮೀನಾ ತಿಳಿಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, . ವಿಶೇಷ ವಿಕಲಚೇತನರು ಮನೆಯಿಂದಲೇ ಮತದಾನ ಮಾಡಬಹುದು.

ಮನೆಯಿಂದ ಮತ ಹಾಕುವವರಿಗೆ ಫಾರಂ 12ರಡಿ ಅನುಮತಿ ನೀಡಲಾಗುತ್ತೆ. ವಿಕಲಚೇತನರು ಇರುವ ಮನೆಗೆ ಚುನಾವಣಾ ಸಿಬ್ಬಂದಿ ತೆರಳಲಿದ್ದಾರೆ. ನಮ್ಮ ಸಿಬ್ಬಂದಿ ಜತೆ ಪಕ್ಷಗಳ ಪ್ರತಿನಿಧಿಗಳು ಕೂಡ ಹೋಗುತ್ತಾರೆ. ವಿಕಲಚೇತನರ ಮತದಾನದ ವೇಳೆ ಗೌಪ್ಯತೆ ಕಾಪಾಡಲಾಗುತ್ತೆ. ಈ ಬಾರಿ ರಾಜ್ಯ ಮತದಾರರ ಪಟ್ಟಿಗೆ 3,021 NRIಗಳ ಹೆಸರು ಸೇರ್ಪಡೆಯಾಗಿವೆ ಎಂದರು.

ಇವತ್ತಿನಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಹಾಗಾಗಿ ಈ ಕ್ಷಣದಿಂದ ರಾಜಕಾರಣಿಗಳ ಕಾರ್ಯಭಾರ ಮುಕ್ತಾಯವಾಗುತ್ತೆ. ಯಾವುದೇ ಸಭೆ, ಸಮಾರಂಭಗಳನ್ನ ಮಾಡಲು ಬರಲ್ಲ. ಅಧಿಕಾರಿಗಳ ಸಭೆ ನಡೆಸೋಕೆ ಬರಲ್ಲ. ಯಾವುದೇ ಯೋಜನೆಗಳಿಗೆ ಸಹಿಹಾಕುವಂತಿಲ್ಲ. ಹೊಸ ಕಾರ್ಯಕ್ರಮ ಅನುಷ್ಟಾನ ಮಾಡುವಂತಿಲ್ಲ. ಇವತ್ತಿನಿಂದ ಎಲ್ಲವೂ ನಿರ್ಬಂಧಿಸಲಾಗುತ್ತದೆ ಎಂದರು. ರಾಜ್ಯದಲ್ಲಿ ಒಟ್ಟು 58282 ಮತಗಟ್ಟೆಗಳಿವೆ. ಕೋವಿಡ್ ಬಾಧಿತರಿಗೆ ಪ್ರತ್ಯೇಕ ಮತಗಟ್ಟೆ ಇರಲಿದೆ. 80 ವರ್ಷ ಮೇಲ್ಪಟ್ಟವರು, ದಿವ್ಯಾಂಗರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಕೋವಿಡ್ ಮಾರ್ಗಸೂಚಿ ಕಡ್ಡಾಯ. ಇವಿಎಂ ಬ್ಯಾಲೆಟ್ ಪೇಪರ್ ನಲ್ಲಿ ಅಭ್ಯರ್ಥಿಗಳ ಭಾವಚಿತ್ರವಿರಲಿದೆ. ನೋಟಾ ಆಯ್ಕೆಯ ವ್ಯವಸ್ಥೆ ಇದೆ ಎಂದು ಮಾಹಿತಿ ನೀಡಿದರು.

About Author

Leave a Reply

Your email address will not be published. Required fields are marked *

You may have missed