ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಸಿನಿಮಾಗೆ ನಾಯಕಿಯಾದ ಶ್ರದ್ಧಾ ಕಪೂರ್

0

‘ಆರ್‌ಆರ್‌ಆರ್’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಜ್ಯೂ.ಎನ್‌ಟಿಆರ್ ಮತ್ತೊಂದು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಕೊರಟಾಲ ಶಿವ ನಿರ್ದೇಶನದ ಸಿನಿಮಾದಲ್ಲಿ ಜ್ಯೂ ಎನ್ ಟಿ ಆರ್ ತೊಡಗಿಕೊಂಡಿದ್ದು ಈ ಮಧ್ಯೆ ಪ್ರಶಾಂತ್ ನೀಲ್ ನಿರ್ದೇಶನದ ತಾರಕ್ ಚಿತ್ರದ ಬಗ್ಗೆ ಮತ್ತೊಂದು ಬಿಗ್ ಅಪ್‌ಡೇಟ್ ಸಿಕ್ಕಿದೆ.

ಜ್ಯೂ.ಎನ್‌ಟಿಆರ್ ಮಂದಿನ ಸಿನಿಮಾಗೆ ನಾಯಕಿ ಫೈನಲ್ ಆಗಿದ್ದಾರೆ.

ಕೊರಟಾಲ ಶಿವ ನಿರ್ದೇಶನದ ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್ ಬ್ಯುಸಿಯಾಗಿದ್ದಾರೆ. ಜಾನ್ವಿ ಕಪೂರ್, ಸೈಫ್ ಅಲಿ ಖಾನ್, ಕನ್ನಡದ ನಟಿ ಚೈತ್ರಾ ರೈ ಸೇರಿದಂತೆ ಹಲವರು ಶೂಟಿಂಗ್ ಭಾಗಿಯಾಗಿದ್ದು ಈ ಮಧ್ಯೆ ಚಿತ್ರತಂಡಕ್ಕೆ ನಾಯಕಿಯಾ ಆಯ್ಕೆಯಾಗಿದ್ದಾರೆ.

ಕೆಜಿಎಫ್ 2 ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್, ಸಲಾರ್‌ನಲ್ಲಿ ಬ್ಯುಸಿಯಾಗಿದ್ದಾರೆ. ಎನ್‌ಟಿಆರ್ 30 ಬಳಿಕ ತಾರಕ್, ಪ್ರಶಾಂತ್ ನೀಲ್ ಜೊತೆ ಕೈಜೋಡಿಸಲಿದ್ದಾರೆ. ಸಲಾರ್ ಬಳಿಕ ಜ್ಯೂ.ಎನ್‌ಟಿರ್ 31ನೇ ಚಿತ್ರಕ್ಕೆ ನೀಲ್ ನಿರ್ದೇಶನ ಮಾಡಲಿದ್ದಾರೆ. ತಾರಕ್ ಜೊತೆ ರೊಮ್ಯಾನ್ಸ್ ಮಾಡಲು ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಫೈನಲ್ ಆಗಿದ್ದಾರೆ. ಇದೇ ಮೊದಲ ಭಾರಿಗೆ ಶ್ರದ್ಧಾ ಹಾಗೂ ಜೂನಿಯರ್ ಎನ್ ಟಿ ಆರ್ ಒಂದಾಗಿದ್ದು ಈ ಜೋಡಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

About Author

Leave a Reply

Your email address will not be published. Required fields are marked *

You may have missed