PSI ಮರುಪರೀಕ್ಷೆ ಅಸಾಧ್ಯ: ಹೈಕೋರ್ಟ್ ಸ್ಪಷ್ಟನೆ

0

ಬೆಂಗಳೂರು: ಕಳಂಕಿತರನ್ನು ಹೊರಗಿಟ್ಟು PSI ಮರು ಪರೀಕ್ಷೆ ಸಾಧ್ಯವಿಲ್ಲವೆಂದು ಬೆಂಗಳೂರಿನ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ನ್ಯಾಯಮೂರ್ತಿಜಿ ಜಿ.ನರೇಂದರ್ ನೇತೃತ್ವದ ವಿಭಾಗಿಯ ಪೀಠದಲ್ಲಿ ಬುಧವಾರ ವಿಚಾರಣೆ ನಡೆದಿದೆ.

ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಪಿಎಸ್‌ಐ ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲಿ ದೋಷಾರೋಪ ಪಟ್ಟಿಯಲ್ಲಿ ಹೆಸರಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ.

ಸರ್ಕಾರದ ಮಟ್ಟದಲ್ಲಿ ಈ ಸಂಬಂಧ ಚರ್ಚೆ ನಡೆದು, ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ. ಯಾವ ಕಾರಣಕ್ಕೆ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂಬುದರ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಜುಲೈ 10ರಂದು ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಎಲ್ಲಾ ಪಕ್ಷಗಾರರ ಪರ ವಕೀಲರಿಗೆ ಲಿಖಿತ ವಾದಾಂಶ ಸಲ್ಲಿಸಲು ಸೂಚನೆ ನೀಡಿದೆ.

About Author

Leave a Reply

Your email address will not be published. Required fields are marked *

You may have missed